ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ
ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳ್ಳಬಟ್ಟಿ ತಯಾರಿಸ್ತಿದ್ದ ವೇಳೆಯಲ್ಲಿಯೇ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ ನಿವಾಸಿಯೊಬ್ಬರು ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ ತಯಾರಿಸ್ತಿರುವುದು ಕಂಡುಬಂದಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಅಬಕಾರಿ ಕಾಯ್ದೆ … Read more