ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಸಾಗಾಟ, ತಹಶೀಲ್ದಾರ್​ ಡಾ, ಪ್ರತಿಭಾರಿಂದ ದಾಳಿ, ಕೊಟ್ಟ ಎಚ್ಚರಿಕೆ​​ ಏನು ಗೊತ್ತಾ?

ಹಂಚಿಕೊಳ್ಳಿ
WhatsApp Facebook X Telegram
Tahsildar Raids Illegal Mining, Truck Seized
Tahsildar Raids Illegal Mining, Truck Seized

Tahsildar Raids ಸಾಗರ: ಅಕ್ರಮವಾಗಿ ಜಂಬಿಟ್ಟಿಗೆಯನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಅವರು ಪೊಲೀಸರೊಂದಿಗೆ ಕಾರ್ಯಾಚರಣೆ ನಡೆಸಿ, ವಾಹನ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೊದಲಿನಿಂದಲೂ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಅವರು ಅಕ್ರಮಗಳಿಗೆ ಪೂರ್ಣ ತಡೆ ಹಾಕುತ್ತಾ ದಿಟ್ಟತನದಿಂದ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಜಂಬಿಟ್ಟಿಗೆ ಗಣಿಗಾರಿಕೆ ಪ್ರದೇಶದ ಮೇಲೆ ನಡೆಸಿರುವ ಈ ದಾಳಿಯು ಅವರ ದಕ್ಷತೆಗೆ ಮತ್ತೊಂದು ಸಾಕ್ಷಿಯಾಗಿದೆ.

ಶಿವಮೊಗ್ಗ: ತೆಂಗಿನ ಗರಿ ಕಡಿದು ರೌಂಡ್​​​ ಅಪ್​ ಸಿಡಿಸಿದ ವಿಚಾರ ; 112ಗೆ ದೂರು! 

ಸಾಗರ ತಾಲೂಕಿನ ಬೊಮ್ಮತ್ತಿ ಸಮೀಪದ ಬ್ರಾಹ್ಮಣ ಮಂಚಾಲೆ ಗ್ರಾಮದ ಸರ್ವೇ ನಂ. 107ರಲ್ಲಿ ಯಾವುದೇ ರೀತಿಯ ಅನುಮತಿ ಇಲ್ಲದೆ ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸಲಾಗುತ್ತಿತ್ತು. ಅಲ್ಲಿಂದ ಜಂಬಿಟ್ಟಿಗೆಯನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ತಹಶೀಲ್ದಾರ್ ಡಾ. ಪ್ರತಿಭಾ ಅವರು ಕಂದಾಯ ಪರಿವೀಕ್ಷಕರಾದ ಗುರುರಾಜ್ ಹಾಗೂ ಇತರ ಅಧಿಕಾರಿಗಳ ತಂಡದೊಂದಿಗೆ ದಿಢೀರ್ ದಾಳಿ ನಡೆಸಿ, ಲಾರಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಒತ್ತುವರಿ ಹಾಗೂ ಕಾನೂನುಬಾಹಿರ ಗಣಿಗಾರಿಕೆ ಚಟುವಟಿಕೆಗಳ ವಿರುದ್ಧ ಸಮರ ಸಾರಿರುವ ತಹಶೀಲ್ದಾರ್, ಯಾರೇ ಆಗಲಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿಸಿಕೊಂಡರೆ ದಾಳಿ ನಡೆಸಿ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor