ಮಹಿಳೆಯರಿಗೆ ಟೈಲರಿಂಗ್​-ಡ್ರೆಸ್​ ಡಿಸೈನ್​ ತರಬೇತಿ! ಅರ್ಜಿ ಆಹ್ವಾನ! ವಿವರ ಇಲ್ಲಿದೆ

Tailoring-dress design training for women! Application invited! Here's the details

ಮಹಿಳೆಯರಿಗೆ ಟೈಲರಿಂಗ್​-ಡ್ರೆಸ್​ ಡಿಸೈನ್​ ತರಬೇತಿ! ಅರ್ಜಿ ಆಹ್ವಾನ! ವಿವರ ಇಲ್ಲಿದೆ

MALENADUTODAY.COM | SHIVAMOGGA  | #KANNADANEWSWEB

ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಮಹಿಳಾ ಟೈಲರಿಂಗ್ - ಡ್ರೆಸ್ ಡಿಸೈನ್ (30 ದಿನಗಳ) ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು, ಗ್ರಾಮೀಣ ಬಿ.ಪಿ.ಎಲ್ ಕಾರ್ಡ್ ಹೊಂದಿರಬೇಕುಮತ್ತು8 ನೇತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿ ಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು13/03/2023 ರಿಂದಪ್ರಾರಂಭವಾಗಲಿದ್ದು, ತರಬೇತಿಗೆ ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳನ್ನು ಬರೆದು ಈ ಕೆಳಗಿನ ವಿಳಾಸಕ್ಕೆ ಕೂಡಲೇ/ ತಕ್ಷಣವೇ ಅರ್ಜಿ ಸಲ್ಲಿಸಬಹುದು. ನಿರ್ದೇಶಕರು,

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ - ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 974342 9595, 8660062683, 9449371579, 9481955721

BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com