ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 20 2025 : ಶಿಕ್ಷಣ ಇಲಾಖೆಯು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಸಂಬಂಧಿಸಿದಂತೆ 2024-25ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು, ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಸೇರಿದಂತೆ ಎಲ್ಲ ವೃಂದಗಳಿಗೂ ಈ ಪರಿಷ್ಕೃತ ನಿಯಮಗಳು ಅನ್ವಯಿಸುತ್ತವೆ. ಸರ್ಕಾರವು ಶಿಕ್ಷಕರ ವರ್ಗಾವಣೆ ನಿಯಂತ್ರಣ ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ-2022ರ ಪ್ರಕಾರ ಈ ವೇಳಾಪಟ್ಟಿಯನ್ನು ರೂಪಿಸಿದ್ದು, ವರ್ಗಾವಣೆ ನಿಯಮ 6ರಲ್ಲಿ ನಿರ್ದಿಷ್ಟಪಡಿಸಿರುವ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ.

ಹಿಂದಿನ ಅಧಿಸೂಚನೆಗಳಲ್ಲಿ ತಿಳಿಸಲಾಗಿದ್ದ ಎಲ್ಲಾ ಮಾರ್ಗಸೂಚಿಗಳು ಈ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಅನ್ವಯವಾಗುತ್ತವೆ ಮತ್ತು ಮುಂದುವರೆಯುತ್ತವೆ. ಶಿಕ್ಷಕರು ಹೊಸ ವೇಳಾಪಟ್ಟಿಯೊಂದಿಗೆ ಈ ಹಿಂದಿನ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಇಲಾಖೆ ಸೂಚಿಸಿದೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!