ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗದ ರಾಗಿಗುಡ್ಡದಲ್ಲಿ ಕೆಲ ತಿಂಗಳ ಹಿಂದೆ ಹಿಂದೂ ದೇವರ ವಿಗ್ರಹಗಳಿಗೆ ಹಾನಿ ಮಾಡಿದ್ದ ಘಟನೆ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಹೊಸದಾಗಿ ದೇವಾಲಯ ನಿರ್ಮಾಣವಾಗುತ್ತಿದೆ. ನಗರದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಹಾನಿಗೊಳಗಾಗಿದ್ದ ಜಾಗದಲ್ಲಿ ನೂತನ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸೇರಿದಂತೆ ವಿವಿಧ ಗಣ್ಯರ ಸಹಾಯದಿಂದ ದೇವಾಲಯವನ್ನು ನಿರ್ಮಾಣಮಾಡಲಾಗುತ್ತಿದೆ. ಇವತ್ತು ಈ ದೇವಾಲಯದ ಹೊಸ್ತಿಲು ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರು ದೇವಸ್ಥಾನದ ಹೊಸ್ತಿಲು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು.

ಇಂದು ವಿಧಿ ವಿಧಾನಗಳೊಂದಿಗೆ ಹೊಸ್ತಿಲು ಪೂಜೆ ನೆರವೇರಿಸಲಾಯಿತು. ದೇವಾಲಯದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡು, ಇದು ಭಕ್ತರ ಶ್ರದ್ಧಾ ಕೇಂದ್ರವಾಗಿ ಹಾಗೂ ಸಮಾಜದ ಧಾರ್ಮಿಕ ಮತ್ತು ಸಾಂಸ್ಕೃತಿಕ ಏಕತೆಯ ಸಂಕೇತವಾಗಿ ರೂಪುಗೊಳ್ಳಲಿ ಎಂದು ಶಾಸಕರು ಈ ಸಂದರ್ಭದಲ್ಲಿ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಸವರಾಜ್, ದೇವಾಲಯ ಸಮಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!