Holehonnur / ಹೊಳೆಹೊನ್ನೂರು: ದೇವಸ್ಥಾನದಲ್ಲಿ ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳನನ್ನು ಪಟ್ಟಣದ ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹10.49 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಬೈಕ್ ವಶಪಡಿಕೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಉಮೇಶ್ (45) ಬಂಧಿತ ಆರೋಪಿ . ಈತ ಇಲ್ಲಿನ ಮಾರಿಕಾಂಬ ದೇವಸ್ಥಾನದ ಬೀಗ ಮುರಿದು ಗರ್ಭ ಗುಡಿಯಲ್ಲಿದ್ದ ದೇವಿಯ ಬೆಳ್ಳಿಯ ಮುಖವಾಡ ಮತ್ತು ಬಂಗಾರದ ತಾಳಿ ಕಳವು ಮಾಡಿದ್ದ.
ಈ ಸಂಬಂಧ ಭದ್ರಾವತಿ ತಾಲ್ಲೂಕು ಬೊಮ್ಮನಕಟ್ಟೆಯ ಪಂಡರಹಳ್ಳಿ ಕ್ಯಾಂಪ್‌ನ ಮಾರಿಕಾಂಬ ದೇವಸ್ಥಾನ ಸಮಿತಿ ಅಧ್ಯಕ್ಷ ಟಿ. ಬೈಲಪ್ಪ ತಿಮ್ಮಾಭೋವಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಶಿವಮೊಗ್ಗ ಎಸ್‌ಪಿ ಬಿ.ನಿಖಿಲ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ವಿ.ಜಿ. ಕಾರಿಯಪ್ಪ, ಪಿಐ ಶಿವಪ್ರಕಾಶ್, ಪಿಎಸ್‌ಐ ಶಾಂತಲಾ, ಸಿಬ್ಬಂದಿ ಅಣ್ಣಪ್ಪ, ವಿಶ್ವನಾಥ್, ಪ್ರಕಾಶ್ ನಾಯ್ಕ ಕಾರ್ಯಾಚರಣೆ ನಡೆಸಿದ್ದರು.

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.

Temple Thief Arrested in Holehonnur; Valuables Worth 10.49 Lakh Recovered ಭದ್ರಾವತಿ ತಾಲ್ಲೂಕಿನ ಪಂಡರಹಳ್ಳಿ ಕ್ಯಾಂಪ್‌ನ ಮಾರಿಕಾಂಬ ದೇವಸ್ಥಾನದಲ್ಲಿ ಕಳವು ಮಾಡಿದ್ದ ಚನ್ನಗಿರಿಯ ಅಂತರ ಜಿಲ್ಲಾ ಕಳ್ಳನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ
