MALENADUTODAY.COM |SHIVAMOGGA NEWS
ಶಿವಮೊಗ್ಗ ಜಿಲ್ಲೆಸಾಗರ ತಾಲ್ಲೂಕಿನ ಆನಂದಪುರ ಬಳಿಯಲ್ಲಿ ಅಪಘಾತವೊಂದು ಸಂಭವಿಸಿದೆ. ಇಲ್ಲಿನ ನೇದರವಳ್ಳಿ ಸಮೀಪ ಸ್ಕೂಟಿ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಯುವತಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಯುವತಿಯೊಬ್ಬಳು ಸ್ಕೂಟಿಯಲ್ಲಿ ತೆರಳುತ್ತಿದ್ದಳು. ಈ ವೇಳೇ ಸಾಗರದ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಸ್ಕೂಟಿ ನಡುವೆ ಡಿಕ್ಕಿಯಾಗಿದೆ. ಮೃತ ಯುವತಿಯನ್ನು ಭದ್ರಾವತಿ ಮೂಲದ ಶೃತಿ ಎಂದು ಗುರುತಿಸಲಾಗಿದೆ. ಈ ಸಂಬಂಧ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಮಹಜರ್ ನಡೆಸಿದ್ದಾರೆ.

