5 ಮತ್ತು 8 ತರಗತಿಗೆ ಇನ್ಮುಂದೆ ಇರಲಿದೆ ವಾರ್ಷಿಕ ಪರೀಕ್ಷೆ

ಮಕ್ಕಳ ಕಲಿಕೆಯ ಮಟ್ಟವೇನು ? ಕೊರತೆಗಳೇನು ? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

5 ಮತ್ತು 8 ತರಗತಿಗೆ ಇನ್ಮುಂದೆ ಇರಲಿದೆ ವಾರ್ಷಿಕ ಪರೀಕ್ಷೆ

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯ ಪಠ್ಯಕ್ರಮದ  ಶಾಲೆಗಳಲ್ಲಿ 5 ಮತ್ತು 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೌಲ್ಯಾಂಕದ ವ್ಯವಸ್ಥೆಯಲ್ಲಿ ಮಕ್ಕಳ ಕಲಿಕಾ ಕೊರತೆ ನೀಗಿಸಲು, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಒಟ್ಟಾರೆ ಸಾಧನೆ ಯಾವ ರೀತಿ ಇದೆ ಎಂಬುದನ್ನು ತಿಳಿಯುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಣಯ ಕೈಗೊಂಡಿದೆಂತೆ. 

ಇದನ್ನು ಸಹ ಒದಿ : ಅಡಿಕೆ ದರ  ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ  ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಈ ಸಂಬಂಧ ಅಧಿಸೂಚನೆಯನ್ನು ಸಹ ಹೊರಡಿಸಿದೆ. ಮಕ್ಕಳ ಕಲಿಕೆಯ ಮಟ್ಟವೇನು ? ಕೊರತೆಗಳೇನು ? ಯಾವ ವಿಷಯದಲ್ಲಿ ಹಿನ್ನಡೆ ಉಂಟಾಗಿದೆ ? ಇವುಗಳನ್ನು ನಿವಾರಿಸಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದನ್ನು ನಿರ್ಧರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎಲ್ಲಾ ಶಾಲಾ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಕಲಿಕಾ-ಫಲಗಳು, ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಶಿಸುವ ಅವಶ್ಯಕತೆಯಿದೆ. ಶಾಲಾ ಹಂತದಲ್ಲಿ ಪರೀಕ್ಷೆ ನಿರ್ವಹಿಸಿ, ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಕಲಿಕಾ ಪ್ರಗತಿ ಕುಂಠಿತವಾಗಿರುವ ವಿಷಯವಾರು, ಶಾಲಾವಾರು, ಕ್ಲಸ್ಟರ್, ತಾಲೂಕು ವಾರು ವಿಶ್ಲೇಷಿಸಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅಗತ್ಯ ಕ್ರಿಯಾ ಯೋಜನೆ ರೂಪಿಸಿ, ಬೋಧನಾ-ಕಲಿಕಾ ಪ್ರಕ್ರಿಯೆ ಬಲವರ್ಧನೆಗೊಳಿಸುವ ಉದ್ದೇಶ ಹೊಂದಿದ್ದು, ಪರೀಕ್ಷಾ ನಿರ್ವಹಣೆಗೆ ಅಗತ್ಯ ಪೂರ್ಣ ಸಿದ್ಧತೆ ಕೈಗೊಳ್ಳಲು ಮಾರ್ಗಸೂಚಿ ಸಿದ್ಧಪಡಿಸಿ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕರ ಗಮನಕ್ಕೆ | 14 ನೇ ತಾರೀಖು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಪವರ್​ ಕಟ್

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್​ ಗ್ರೂಪ್​ನ ಲಿಂಕ್​ಗೆ ಕ್ಲಿಕ್ ಮಾಡಿ :  Whatsapp