ಶಿರಾಳಕೊಪ್ಪದ ಬಳಿ ನಿಯಂತ್ರಣ ತಪ್ಪಿದ ಕಾರು! ಸ್ಥಳದಲ್ಲಿಯೇ ಓರ್ವನ ಸಾವು!

The car lost control and met with an accident near Shiralakoppa. ಶಿರಾಳಕೊಪ್ಪದ ಬಳಿ ಕಾರೊಂದು ನಿಯಂತ್ರಣ ತಪ್ಪಿ ಆಕ್ಸಿಡೆಂಟ್ ಆಗಿದೆ.

ಶಿರಾಳಕೊಪ್ಪದ ಬಳಿ ನಿಯಂತ್ರಣ ತಪ್ಪಿದ ಕಾರು! ಸ್ಥಳದಲ್ಲಿಯೇ ಓರ್ವನ ಸಾವು!

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದ ಸಮೀಪ ಆಕ್ಸಿಡೆಂಟ್ ಸಂಭವಿಸಿದ್ದು ಓರ್ವರು ಮೃತಪಟ್ಟಿದ್ದಾರೆ. 

ನಡೆದಿದ್ದೇನು?

ದಿ:18.08.2023 ರಂದು ಶಿರಾಳಕೊಪ್ಪದ ಉಡುಗಣಿ ಹತ್ತಿರ ಈ ಅಪಘಾತ ಸಂಭವಿಸಿದೆ. ಈ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಆಕ್ಸಿಡೆಂಟ್ ಆಗಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಶಿಕಾರಿಪುರ ಆಸ್ಙತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನೂ ಸ್ಥಳಕ್ಕೆ ಬಂದ ಪೊಲೀಸ್ ಸಿಬ್ಬಂದಿ ಕಾರನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿದ್ದಾರೆ..  

ಪ್ರಧಾನಿ ಮೋದಿ ವಿಚಾರದಲ್ಲಿ ವಕೀಲ ನಾಗರಾಜ್ ಕುಡುಪಲಿ ವಿರುದ್ಧ ವಕೀಲರಿಂದ ದಾಖಲಾಯ್ತು ದೂರು!

 ನ್ಯಾಯವಾದಿ ನಾಗರಾಜ್ ಕುಡುಪಲಿ ಎಂಬುವವರ ವಿರುದ್ಧ ಶಿವಮೊಗ್ಗ ಜಿಲ್ಲೆ  ಸಾಗರ ತಾಲ್ಲೂಕಿನ  ನ್ಯಾಯವಾದಿ ಕೆ.ವಿ.ಪ್ರವೀಣ್ ಸಾಗರ ನಗರ ಠಾಣೆಗೆ (sagar town police station) ಶುಕ್ರವಾರ ದೂರು ನೀಡಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಹಾಗೂ ತಮ್ಮ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಸಂಬಂಧ ಈ ದೂರು ನೀಡಿದ್ದಾರೆ.  

ದೂರಿನ ಸಾರಾಂಶವೇನು?

ಮೈಸೂರಿನಲ್ಲಿ ಆ.12 ಮತ್ತು 13ರಂದು ನಡೆದ ರಾಜ್ಯಮಟ್ಟದ ವಕೀಲರ ಸಮ್ಮೇಳನದಲ್ಲಿ ನನಗೆ ನಾಗರಾಜ ಅವರ ಪರಿಚಯವಾಗಿತ್ತು. ಆ. 12 ರಂದು ಅವರು ನನ್ನೊಂದಿಗೆ ಮಾತನಾಡುತ್ತಾ, ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನನ್ನ ಜತೆ ಚಾಲೆಂಜ್ ಮಾಡಿದ್ದಾರೆ. ಹೀಗೆ ಚಾಲೆಂಜ್ ಮಾಡಿದ ವಿಡಿಯೋವನ್ನು ನಾವಿಬ್ಬರು ಪರಸ್ಪರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇವೆ. ಕುಡುಪಲಿ ಅವರು ತಮ್ಮ ಫೇಸ್‌ಬುಕ್ ಖಾತೆ ಸುದ್ದಿ ಚಾವಡಿಗೆ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ಆ 14ರಂದು ಪುನಃ ಅವರು ಇನ್ನೊಂದು ವಿಡಿಯೋ ಮಾಡಿ ಅದನ್ನು ತಮ್ಮ ಸುದ್ದಿ ಚಾವಡಿ ಖಾತೆಗೆ ಅಪ್‌ಲೋಡ್ ಮಾಡಿದ್ದಾರೆ.

ಆ ವಿಡಿಯೋದಲ್ಲಿ ”ಬಿಜೆಪಿ ಮುಕ್ತ ಕರ್ನಾಟಕವಾಗಬೇಕು. ಮೋದಿಯೇನು ದೇವರೇನ್ರಿ, ಹಿ ವಾಸ್ ಒನ್ ಆಫ್ ದಿ ಟೆವೆಂಡರ್, ಹುದ್ದೆ ಬಿಟ್ಟರೆ ಯಾರವರು, ಹೂ ಈಸ್ ಹಿ, ಸ್ವತಂತ್ರವಾಗಿ ವಿಮಾನದಲ್ಲಿ ಅಡ್ಡಾಡುವ ಶಕ್ತಿ ಅವನಿಗೆ ಇಲ್ಲ, ನಾನು ದುಡಿದ ಹಣದಲ್ಲಿ ವಿಮಾನದ ಟಿಕೆಟ್ ತೆಗೆದುಕೊಂಡು ಓಡಾಡುತ್ತೇನೆ. ಅವರದೇನಿದೆ ದುಡಿಮೆ ಎಂದು ಹೇಳಿರುವ ಜತೆಗೆ, ಇವತ್ತು ಒಬ್ಬ ಪ್ರವೀಣ ಎಂಬ ಕೋಮುವಾದಿ ನನ್ನನ್ನು ಭೇಟಿಯಾಗಿದ್ದು ಫೇಸ್‌ಬುಕ್ ಮತ್ತು ಫೋನ್‌ನಲ್ಲಿರುವ ದುಷ್ಟಬುದ್ಧಿ ಇರುವವನು ಎಂದು ಅವಹೇಳನಾಕಾರಿಯಾಗಿ ದೇಶದ ಪ್ರಧಾನಮಂತ್ರಿಗಳು ಮತ್ತು ನನ್ನ ಬಗ್ಗೆ ಮಾತನಾಡಿದ್ದಾರೆ.ದೇಶದ ಪ್ರಧಾನಿ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ಮಾತನಾಡಿದ್ದು, ನನ್ನ ವಿರುದ್ದವೂ ಮಾನಹಾನಿಯಾಗುವಂತಹ ಟೀಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾಗರಾಜ್ ಕುಡುಪಲಿ ಎಂಬುವವರನ್ನು ಕರೆಸಿ ವಿಚಾರಣೆ ನಡೆಸುವ ಜೊತೆಗೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಕೆ.ವಿ.ಪ್ರವೀಣ್  ಆರೋಪಿಸಿದ್ದಾರೆ. 

 

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು