ಹೊಸನಗರ, ಭದ್ರಾವತಿ ಈ ಗ್ರಾಮಗಳಲ್ಲಿ ಶಸ್ತ್ರಾಸ್ತ್ರಗಳನ್ನ ಪೊಲೀಸ್ ಸ್ಟೇಷನ್​ಗೆ ನೀಡಲು ಜಿಲ್ಲಾಡಳಿತ ಸೂಚನೆ

The district administration has instructed to hand over the weapons to the police station in Hosanagara and Bhadravathi villages.

ಹೊಸನಗರ, ಭದ್ರಾವತಿ ಈ ಗ್ರಾಮಗಳಲ್ಲಿ ಶಸ್ತ್ರಾಸ್ತ್ರಗಳನ್ನ ಪೊಲೀಸ್ ಸ್ಟೇಷನ್​ಗೆ ನೀಡಲು ಜಿಲ್ಲಾಡಳಿತ ಸೂಚನೆ
ಹೊಸನಗರ, ಭದ್ರಾವತಿ ಈ ಗ್ರಾಮಗಳಲ್ಲಿ ಶಸ್ತ್ರಾಸ್ತ್ರಗಳನ್ನ ಪೊಲೀಸ್ ಸ್ಟೇಷನ್​ಗೆ ನೀಡಲು ಜಿಲ್ಲಾಡಳಿತ ಸೂಚನೆ

MALENADUTODAY.COM | SHIVAMOGGA  | #KANNADANEWSWEB

ಗ್ರಾಮ ಪಾಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಕಾರಣ ಆ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಯ ಸಾರ್ವಜನಿಕರ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಸಮೀಪದ ಪೊಲೀಸ್ ಠಾಣೆಯಲ್ಲಿ ಠೇವಣಿ ಮಾಡಲು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.

BREAKING : ಮತ್ತೊಂದು ದರೋಡೆ ಯತ್ನವನ್ನು ತಡೆದ ಶಿವಮೊಗ್ಗ ಪೊಲೀಸ್! ನಾಲ್ವರ ಬಂಧನ !

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೆದ್ದಾರಿಪುರ-12, ನಾಗೋಡಿ(ನಿಟ್ಟೂರು)-18 ಹಾಗೂ ಭದ್ರಾವತಿ ತಾಲ್ಲೂಕಿನ ಯಡೇಹಳ್ಳಿ-09 ಗ್ರಾಮ ಪಂಚಾಯಿತಿಗಳ  ವ್ಯಾಪ್ತಿಯಲ್ಲಿ  ಠೇವಣಿಯಲ್ಲಿ ಇಡಲಾದ ಶಸ್ತ್ರ/ಆಯುಧಗಳನ್ನು ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಸುರಕ್ಷಿತವಾಗಿ ಇಟ್ಟುಕೊಳ್ಳುವುದಲ್ಲದೇ ಠೇವಣಿ ಮಾಡಿದ ಆಯುಧ ಪರವಾನಿಗೆದಾರರಿಗೆ ಸೂಕ್ತ ರಶೀದಿಯನ್ನು ತಪ್ಪದೇ ನೀಡುವುದು. ಈ ಆಯುಧಗಳನ್ನು ಚುನಾವಣಾ ಫಲಿತಾಂಶವನ್ನು ಘೋಷಿಸಿದ ನಂತರ ಡಿಪಾಸಿಟ್ ಮಾಡಿದ ಪರವಾನಿಗೆದಾರರಿಗೆ ಹೊಂದಿರುಗಿಸಲಾಗುವುದು.

ಒಂದೇ ಬ್ಯಾನರ್​ನಲ್ಲಿ ಒಂದಾದ ಇಬ್ಬರು ನಾಯಕರು! ತೀರ್ಥಹಳ್ಳಿಯಲ್ಲಿ ಕಿಮ್ಮನೆರತ್ನಾಕರ್​ ಮತ್ತು ಆರ್​ಎಂ.ಮಂಜುನಾಥ್​ ಗೌಡರ ಜೋಡೆತ್ತಿನ ಹೋರಾಟ

ಸರ್ಕಾರಿ ಕರ್ತವ್ಯದಲ್ಲಿ ನಿರತರಾದ ರಕ್ಷಣಾ ಸಿಬ್ಬಂದಿಗಳಿಗೆ ಎಂ.ಪಿ.ಎಂ/ವಿ.ಐ.ಎಸ್.ಎಲ್ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಇತ್ಯಾದಿಗಳಲ್ಲಿ ಭದ್ರತಾ ಕರ್ತವ್ಯದಲ್ಲಿರುವ ಸಿಬ್ಬಂದಿಗಳು ಅಧಿಕೃತ ಪರವಾನಿಗೆಯಲ್ಲಿ ಹೊಂದಿರುವ ಆಯುಧಗಳಿಗೆ ಈ ಆದೇಶವು ಅನ್ವಯಿಸುವುದಿಲ್ಲ. ಚುನಾವಣೆಯು ಮುಕ್ತ ಹಾಗೂ ನ್ಯಾಯಯುತವಾಗಿ ನಡೆಯಬೇಕಾಗಿರುವುದರಿಂದ ಜಿಲ್ಲಾ ಆಡಳಿತವು ಕೈಗೊಂಡ ಕ್ರಮಕ್ಕೆ ಸಾರ್ವಜನಿಕರು ಸಹಕರಿಸಬೇಕಾಗಿ ಅವರು ತಿಳಿಸಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com