SHIVAMOGGA | Dec 28, 2023 | ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನೀಚಡಿಯಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದ ಪರಿಣಾಮ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ತೋಟದ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕಟ್ಟೆಯಿಲ್ಲದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಮೃತರನ್ನು ಜಿಗಳೆ ಮನೆಯ ಬಂಗಾರಪ್ಪ ಎಂದು ಗುರುತಿಸಲಾಗಿದ್ದು, ಅವರಿಗೆ 55 ವರ್ಷ ವಯಸ್ಸಾಗಿತ್ತು.
ಆನಂದಪುರ ಪೊಲೀಸ್ ಸ್ಟೇಷನ್
ಇಲ್ಲಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಬಂಗಾರಪ್ಪರವರು ಕಾಲು ಜಾರಿ ಆಯ ತಪ್ಪಿ ಸೀದಾ ಬಾವಿಗೆ ಬಿದ್ದಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಅಕ್ಕಪಕ್ಕದವರು ಅಲ್ಲಿಗೆ ಬಂದಿದ್ದಾರೆ.
ಆನಂತರ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದಾರೆ ಅಷ್ಟರಲ್ಲಿ ಅನಾಹುತ ಸಂಭವಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಪ್ರಕರಣ ಆನಂದಪುರ ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಗಿದೆ
TAGGED:Anandpur Police Station
