ಶಿವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಮೂರು ಬೈಕ್​ಗಳ ನಡುವೆ ಡಿಕ್ಕಿ! ಮಹಿಳೆ ಸೇರಿ ಮೂವರಿಗೆ ಗಾಯ! ಏನಿದು ಘಟನೆ

The incident took place near Veeranna Benavalli near Ayanur in Shimoga, ಶಿವಮೊಗ್ಗದ ಆಯನೂರು ಸಮೀಪ ವೀರಣ್ಣ ಬೆನವಳ್ಳಿಯ ಬಳಿಯಲ್ಲಿ ಈ ಘಟನೆ ಸಂಭವಿಸಿದೆ

ಶಿವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಮೂರು ಬೈಕ್​ಗಳ ನಡುವೆ ಡಿಕ್ಕಿ! ಮಹಿಳೆ ಸೇರಿ ಮೂವರಿಗೆ ಗಾಯ! ಏನಿದು ಘಟನೆ



KARNATAKA NEWS/ ONLINE / Malenadu today/ Oct 9, 2023 SHIVAMOGGA NEWS

ಶಿವಮೊಗ್ಗದ ಆಯನೂರು ಸಮೀಪ ಮೂರು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. 

ಇವತ್ತು ಬೆಳಗ್ಗೆ ವೀರಣ್ಣನ ಬೆನವಳ್ಳಿ ಸಮೀಪ ಈ ಘಟನೆ ಸಂಭವಿಸಿದೆ. ಆಯನೂರು ಕಡೆಯಿಂದ ಶಿವಮೊಗ್ಗ ಕಡೆ ಬೈಕ್​ವೊಂದು ಬರುತ್ತಿತ್ತು. ಅದೇ ಸಂದರ್ಭದಲ್ಲಿ ಶಿವಮೊಗ್ಗದ ಕಡೆಯಿಂದ ಎರಡು ಬೈಕ್​ಗಳು ಆಯನೂರು ಕಡೆಗೆ ಹೋಗುತ್ತಿತ್ತು. ಈ ಮಧ್ಯೆ ಒಂದು ಬೈಕ್​ ಸವಾರ ಟರ್ನ್​ ತೆಗೆದುಕೊಂಡಿದ್ದಾನೆ ಎನ್ನಲಾಗಿದ್ದು, ಹಿಂದಿನಿಂದ ಬರುತ್ತಿದ್ದ ಬೈಕ್​ ಮುಂದಿನ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್​ ಎದುರು ಆಕ್ಸಿಡೆಂಟ್ ಆದ ಬೈಕ್​ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್​ನಲ್ಲಿದ್ದ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಇನ್ನೂ  ಆಯನೂರು ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೂ ಗಾಯವಾಗಿದೆ. 

ವಿಷಯ ತಿಳಿಯುತ್ತಲೇ ಸ್ಥಳದಲಿದ್ದವರು ಆ್ಯಂಬುಲೆನ್ಸ್​ಗೆ ಕರೆ ಮಾಡಿ ಮೂವರನ್ನ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಸದ್ಯ ಮೂವರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದಾರೆ . ಆಯನೂರು ಉಪಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಬಂಧ ಪೊಲೀಸರು ಮಹಜರು ನಡೆಸಿದ್ದಾರೆ.  


ಇನ್ನಷ್ಟು ಸುದ್ದಿಗಳು 

  1.  ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?