KARNATAKA NEWS/ ONLINE / Malenadu today/ Jun 13, 2023 SHIVAMOGGA NEWS
ಭದ್ರಾವತಿ/ ಕೇಂದ್ರ ಉಕ್ಕು ಪ್ರಾಧಿಕಾರ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಹಂತ ಹಂತವಾಗಿ ಉತ್ಪಾದನೆ ಸ್ಥಗಿತಗೊಳ್ಳುತ್ತಿದ್ದು,, ಗುತ್ತಿಗೆ ಕಾರ್ಮಿಕರನ್ನ ಕೆಲಸದಿಂದ ತೆಗೆದುಹಾಕಲಾಗುತ್ತಿದೆ.
ಈ ಹಿಂದೆ ಒಂದು ವರ್ಷದ ಅವಧಿಯವರೆಗೂ ಯಾವುದೇ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಳ್ಳುವುದಿಲ್ಲ ಎಂಬ ನಿರ್ಧಾರವನ್ನ ಸಂಸದ ಬಿ.ವೈ .ರಾಘವೇಂದ್ರರವರು ತಿಳಿಸಿದ್ದರು. ಆದರೆ ಇದೀಗ ಫ್ಯಾಕ್ಟರಿಯಲ್ಲಿ ನಿರ್ದಿಷ್ಟ ವಿಭಾಗಗಳನ್ನ ಬಂದ್ ಮಾಡಿ, ಕಾರ್ಮಿಕರನ್ನ ತೆಗೆದುಹಾಕಲಾಗುತ್ತಿದೆ. ಎಚ್‌ಟಿಎಸ್ ಇಲಾಖೆಯಲ್ಲಿನ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದು ಆತಂಕಕ್ಕೆ ಕಾರಣವಾಗಿದೆ.
ಕಾರ್ಖಾನೆಯನ್ನು ಮುಚ್ಚುವ ತೀರ್ಮಾನ ಹೊರಬಿದ್ದ ಬೆನ್ನಲ್ಲೆ ತೀವ್ರ ಪ್ರತಿಭಟನೆಗಳು ನಡೆದಿದ್ದವು, ರಾಜ್ಯದಲ್ಲೆಡೆ ಸೇವ್ ವಿಐಎಸ್ಎಲ್ ಎಂಬ ಅಭಿಯಾನವೇ ಆರಂಭವಾಗಿತ್ತು. ಈ ಮಧ್ಯೆ ಸಂಸದರು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ ಒಂದು ವರ್ಷಗಳ ಕಾಲ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುವ ಬಗ್ಗೆ ಮಾತನಾಡಿದ್ದರು. ಆದರೆ ಇದೀಗ ಮುಚ್ಚುವ ಪ್ರಕ್ರಿಯೆಗಳು ನಿರಾಂತಕವಾಗಿ ಸಾಗುತ್ತಿರುವುದು ಕಾರ್ಮಿಕರ ಆತಂಕಕ್ಕೆ ಕಾರಣವಾಗಿದೆ.
ಭದ್ರಾವತಿಯಲ್ಲಿಂದು ವಿದ್ಯುತ್ ವ್ಯತ್ಯಯ
ಭದ್ರಾವತಿ/ ತಾಲೂಕಿನ ಮೆಸ್ಕಾಂ ಲಕ್ಕವಳ್ಳಿ66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಇವತ್ತು ಅಂದರೆ, ಜೂ.13ರಂದು ಬೆಳಿಗ್ಗೆ 9ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಗೋಣಿಬೀಡು, ಸಿಂಗನಮನೆ, ಗ್ಯಾರೇಜ್ ಕ್ಯಾಂಪ್, ಶಾಂತಿನಗರ, ಶಂಕರಘಟ್ಟ, ತಾವರಘಟ್ಟ, ಎಚ್.ಕೆ ಜಂಕ್ಷನ್, ಕುವೆಂಪು ವಿಶ್ವ ವಿದ್ಯಾನಿಲಯ, ರಂಗನಾಥಪುರ, ತಮ್ಮಡಿಹಳ್ಳಿ, ಮಾಳೇನಹಳ್ಳಿ, ನೆಲ್ಲಿಸರ, ಮಲ್ಲಿಗೇನಹಳ್ಳಿ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.
