theft case in holehonnor ಪೊಲೀಸರ ಭರ್ಜರಿ ಕಾರ್ಯಾಚರಣೆ, ಆರೋಪಿಯಿಂದ 6 ಲಕ್ಷ ಮೌಲ್ಯದ ವಸ್ತುಗಳು ವಶ | ಏನಿದು ಪ್ರಕರಣ

prathapa thirthahalli
Prathapa thirthahalli - content producer

ಹೋಟೆಲ್​ನ ಬಾಗಿಲು ಒಡೆದು ಲಕ್ಷಾಂತರ ಮೌಲ್ಯದ ವಸ್ತಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಕಳ್ಳನನ್ನು ಹೊಳೆಹೊನ್ನೂರು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.

theft case in holehonnor ಏನಿದು ಪ್ರಕರಣ

ಎಪ್ರಿಲ್​ 04 ರಂದು ಭದ್ರಾವತಿ ಎಮ್ಮೆಹಟ್ಟಿ ಗ್ರಾಮದ ಹೋಟೆಲ್​ ಒಂದರ ಬಾಗಿಲು ಒಡೆದು ಕಳ್ಳರು 5 ಬ್ಯಾಟರಿ ಹಾಗೂ ಪಾತ್ರೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಹಿನ್ನೆಲೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಹೋಟೆಲ್​ ಮಾಲೀಕರು ದೂರನ್ನು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂಡವನ್ನು ರಚಿಸಿ ಕಳ್ಳರ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡಿದ್ದರು.

ಇದೀಗ ಹೋಟೆಲ್​ನಲ್ಲಿ ಕಳ್ಳತನ ಮಾಡಿದ್ದ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದು, 27 ವರ್ಷದ ರಾಜೇಶ್​ ಹೆಚ್​ಕೆ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಆತನಿಂದ 60 ಸಾವಿರ ಮೌಲ್ಯದ 5 ಬ್ಯಾಟರಿ 80 ಸಾವಿರ ಮೌಲ್ಯದ ಅಡಿಗೆ ಪಾತ್ರೆಗಳು ಹಾಗೂ ಕೃತ್ಯಕ್ಕೆ ಬಳಸಿದ 5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

 

Share This Article