KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’
ಶಿವಮೊಗ್ಗದ ಮಾಚೇನಹಳ್ಳಿ ಸಮೀಪ ವಿದ್ಯುತ್ ಲೈನ್ ರಿಪೇರಿ ಮಾಡುತ್ತಿದ್ದ ಲೈನ್ ಮ್ಯಾನ್ ಒಬ್ಬರು ಕರೆಂಟ್ ಶಾಕ್ನಿಂದ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ವಿದ್ಯುತ್ ಶಾಕ್ ನಿಂದ ಓರ್ವ ಲೈನ್ ಮ್ಯಾನ್ ಸಾವನ್ನಪ್ಪಿದ್ದು ಇನ್ನಿಬ್ಬರಿಗೆ ಗಾಯಗಳಾಗಿವೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಈ ಮೊದಲೇ ಈ ಭಾಗದಲ್ಲಿ ಮೆಂಟೇನ್ಸ್ ಕಾಮಗಾರಿ ಬಗ್ಗೆ ಮೆಸ್ಕಾಂ ಪ್ರಕಟಣೆ ನೀಡಿತ್ತು. ಅದರಂತೆ ಬೆಳಗ್ಗೆ ಒಂಬತ್ತು ಗಂಟೆಗೆ ವಿದ್ಯುತ್ ಕಡಿತಗೊಳಿಸಲಾಗಿತ್ತು. ಈ ಮಧ್ಯೆ ಇಂಡಸ್ಟ್ರೀಯಲ್ ಏರಿಯಾದ ಮೊದಲನೇ ತಿರುವಿನ ರಸ್ತೆಯಲ್ಲಿ ಇರುವ ಹೈಟೆನ್ಶನ್ ಕಂಬವನ್ನು ಮೆಸ್ಕಾಂ ಸಿಬ್ಬಂದಿ ಹತ್ತಿದ್ದಾರೆ. ಈ ವೇಳೆ ಇದ್ದಕ್ಕಿದ್ದಂತೆ ವಿದ್ಯುತ್ ಪ್ರವಹಿಸಿ ಕಿರಣ್ ಎಂಬಾತ ಕಂಬದಲ್ಲಿಯೇ ಸಾವನ್ನಪ್ಪಿದ್ದಾನೆ. ಇನ್ನೂ ಸುನಿಲ್ ಹಾಗೂ ಭಾಸ್ಕರ್ ಎಂಬವರಿಗೆ ಘಟನೆಯಲ್ಲಿ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, ಅವರ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ವಿದ್ಯುತ್ ಲೈನ್ ಚೇಂಜ್ ವೇಳೆ ಈ ದುರ್ಘಟನೆ ಸಂಭವಿಸಿತಾ? ಅಥವಾ ಜನರೇಟರ್ಗಳ ವಿದ್ಯುತ್ ರಿವರ್ಸ್ ಆಗಿ ಘಟನೆ ಸಂಭವಿಸಿತಾ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಧಿಕಾರಿಗಳು ಪೊಲೀಸ್ ಇಲಾಖೆ ಸಿಬ್ಬಂದಿ ಭೇಟಿಕೊಟ್ಟಿದ್ದು ಪರಿಶೀಲನೆ ನಡೆಸ್ತಿದ್ದಾರೆ. ಇನ್ನೂ ಸಿಬ್ಬಂದಿಯೊಬ್ಬ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿರುವುದು ಲೈನ್ ಮ್ಯಾನ್ಗಳಲ್ಲಿ ಆತಂಕ ಮೂಡಿಸಿದೆ.
ಇನ್ನಷ್ಟು ಸುದ್ದಿಗಳು
ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?
ಚೈತ್ರಾ ಕುಂದಾಪುರ ವಿರುದ್ಧ ಟಿಕೆಟ್ ಡೀಲ್ ಕೇಸ್/ ಶಿವಮೊಗ್ಗ ನಗರದಲ್ಲಿ ಆರೋಪಿ ಮಹಜರ್! ಯಾರೆಲ್ಲಾ ಬಂದಿದ್ರು!?