KARNATAKA NEWS/ ONLINE / Malenadu today/ Aug 6, 2023 SHIVAMOGGA NEWS
ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ , ಮನೆಯಲ್ಲಿದ್ದ ಗೃಹಿಣಿಯ ಮೇಲೆ ಹಲ್ಲೆ ಮಾಡಿ, ಚಿನ್ನ ದುಡ್ಡು ಕದ್ದೊಯ್ದರ ಆರೋಪಿಗೆ ಬರೋಬ್ಬರಿ 8 ವರ್ಷಗಳ ನಂತರ ಶಿಕ್ಷೆಯಾಗಿದೆ.
ಏನಿದು ಪ್ರಕರಣ?
ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಜನ್ನಾಪುರ ವಾಸಿ 60 ವರ್ಷದ ಮಹಿಳೆಯೊಬ್ಬರು ದಿನಾಂಕಃ 13-01-2015 ರಂದು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಇಲ್ಲಿನ ನಿವಾಸಿ ಕುಮಾರ ಎಂಬಾತ, ಮಹಿಳೆಯ ಮನೆಗೆ ಬಂದು ನೀರು ಕೇಳಿದ್ದ. ಆನಂತರ ಮಹಿಳೆಯು ನೀರು ತರಲು ಅಡುಗೆ ಮನೆಗೆ ಹೋದಾಗ ಅವರ ಕತ್ತಿನಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು, ಕೆಳಗೆ ಬೀಳಿಸಿ ತಲೆದಿಂಬಿನಿಂದ ಮುಖಕ್ಕೆ ಒತ್ತಿ, ಕೈಯಿಂದ ಹೊಡೆದು ಹಲ್ಲೆ ಮಾಡಿದ್ದ. ಅಲ್ಲದೆ,, ಮಾಂಗಲ್ಯ ಸರ, ಹಣ ಮತ್ತು ಮೊಬೈಲ್ ಅನ್ನು ತೆಗೆದುಕೊಂಡು ಹೋಗಿದ್ದ. ಈ ಸಂಬಂಧ 394 ಐಪಿಸಿ ರೀತ್ಯಾ ಪ್ರಕರಣ ದಾಖಲಾಗಿತ್ತು.
ಇದೇ ಪ್ರಕರಣ ಸಂಬಂಧ ಅಂದಿನ ತನಿಖಾಧಿಕಾರಿಗಳಾದ ಪ್ರಭು ಸೂರಿನ್ (CPI) ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣ ಕುರಿತಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ನೀಲಜ್ಯೋತಿ ವಾದ ಮಂಡಿಸಿದ್ದರು. ಇದೀಗ, 04 ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಭದ್ರಾವತಿ ಪ್ರಕರಣ ವಿಚಾರಣೆ ಮುಗಿಸಿ ತೀರ್ಪು ನೀಡಿದೆ.
ದಿನಾಂಕಃ- 05-08-2023 ರಂದು ಆರೋಪಿ ಕುಮಾರ, 42 ವರ್ಷ, ಹಳೇ ಸಂಕ್ಲೀಪುರ ವಾಸಿ ಈತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ 03 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಮತ್ತು 10,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶ ನೀಡಲಾಗಿದೆ.
ಪೋಕ್ಸೋ ಕೇಸ್ ನಲ್ಲಿ 27 ರ ಯುವಕನಿಗೆ 20 ವರ್ಷ ಶಿಕ್ಷೆ ಕೋರ್ಟ್ ಶಿವಮೊಗ್ಗ ಕೋರ್ಟ್! ಅಪ್ರಾಪ್ತೆಯರ ತಂಟೆಗೆ ಹೋದರೆ ಹುಷಾರ್!
14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ 27 ವರ್ಷದ ಆರೋಪಿಗೆ ಬರೋಬ್ಬರಿ 20 ವರ್ಷ ಶಿಕ್ಷೆ ನೀಡಲಾಗಿದೆ. ಈ ಸಂಬಂಧ The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ.
ಏನಿದು ಪ್ರಕರಣ?
2022ನೇ ಸಾಲಿನಲ್ಲಿ ಶಿವಮೊಗ್ಗ ಟೌನ್ ನ 27 ವರ್ಷದ ವ್ಯಕ್ತಿಯೊಬ್ಬನು, 14 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಕೇಳಿಬಂದಿತ್ತು. ಈ ಸಂಬಂಧ ನೊಂದ ಬಾಲಕಿಯ ತಂದೆಯು ದೂರು ನೀಡಿದ್ದರು. ಆನಂತರ ಪ್ರಕರಣವೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಕೊಂಡಿತ್ತು. ಅಂದಿನ ತನಿಖಾಧಿಕಾರಿ ಡಿವೈಎಸ್ಪಿ ಬಾಲರಾಜ್ ಆರೋಪಿ ವಿರುದ್ಧ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ರು.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯ ಇದೀಗ ತೀರ್ಪು ನೀಡಿದೆ. ಈ ಸಂಬಂಧ 04-08-2023 ರಂದು ಆರೋಪಿತನಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,50,000 /- ರೂ ದಂಡ, ದಂಡಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 09 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಇನ್ನಷ್ಟು ಸುದ್ದಿಗಳು
ತಾಯಿ ಜಗನ್ಮಾತೆ ಈ ಸುಂದರನ ಸರ್ವಾಂಗ ಸುಂದರನಾಗಿ ಮಾಡುವಳೇ!? ವೈರಲ್ ಆಯ್ತು ಹರಕೆ!
ಭದ್ರಾವತಿ ಭದ್ರಗಿರಿ, ಶಿವಮೊಗ್ಗ ಗುಡ್ಡೆಕಲ್ ಆಡಿ ಕೃತ್ತಿಕೆ ಜಾತ್ರೆ! ಯಾವಾಗ ಗೊತ್ತ ಭರಣಿ ಕಾವಡಿ ಉತ್ಸವ?
