ತೀರ್ಥಹಳ್ಳಿಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಘಟನೆ! ಡೆವಿಲ್​ ಸಂಭ್ರಮದ ನಡುವೆ 26 ವರ್ಷದ ಪುನೀತ್ ಮರಣ

ajjimane ganesh

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಅಪಘಾತವೊಂದು ಸಂಭವಿಸಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಡಿಕ್ಕಿಯಾಗಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ. 

ತೀರ್ಥಹಳ್ಳಿ ತಾಲ್ಲೂಕು , ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ತಡರಾತ್ರಿ ಘಟನೆ ಸಂಭವಿಸಿದ್ದು,  ಬೈಕ್ ಮತ್ತು ರಾಜಹಂಸ ಬಸ್ ಮಧ್ಯೆ ಡಿಕ್ಕಿಯಾಗಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಪುನೀತ್ (26 ವರ್ಷ) ಎಂದು ಗುರುತಿಸಲಾಗಿದೆ. ಈತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಅಪಘಾತದಲ್ಲಿ ತಲೆಗೆ ಗಂಭೀರವಾದ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಸಫಲಕಾಣಲಿಲ್ಲ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಪರಿಶೀಲನೆ ನಡೆಸ್ತಿದ್ದಾರೆ. ಈ ಮಧ್ಯೆ ಸ್ಥಳೀಯರ ಮಾಹಿತಿ ಪ್ರಕಾರ, ಈತ ಡೆವಿಲ್ ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿ ಪಾಲ್ಗೊಂಡು ವಾಪಸ್ ಆಗುತ್ತಿದ್ದ ಎನ್ನಲಾಗಿದೆ.

Thirthahalli
Thirthahalli

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Thirthahalli
Thirthahalli
Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ತೀರ್ಥಹಳ್ಳಿ ಅಪಘಾತ ಬೈಕ್-ರಾಜಹಂಸ ಬಸ್ ನಡುವೆ ಡಿಕ್ಕಿ, 26 ವರ್ಷದ ಪುನೀತ್ ಸ್ಥಳದಲ್ಲೇ ಸಾವು | Thirthahalli Bike-Rajhamsa Bus Collision, Youth Dies
Share This Article