thirthahalli car accident in malur : ವಾಕಿಂಗ್ ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ | ಸ್ಥಳದಲ್ಲೇ ಸಾವು
ವಾಕಿಂಗ್ ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಲಕ್ಷ್ಮಿ (45) ಮೃತ ದುರ್ದೈವಿ
ಮಾಳೂರಿನ ನಿವಾಸಿಯಾದ ಲಕ್ಷ್ಮಿ ಬೆಳಿಗ್ಗೆ ವಾಕಿಂಗ್ಗೆ ತೆರಳಿ ವಾಪಸ್ ಮನೆಗೆ ಬರುತ್ತಿದ್ದರು. ಆ ವೇಳೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ i 20 ಕಾರೊಂದು ಮಹಿಳೆಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ತೀವ್ರ ಗಾಯಗೊಂಡ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
