ತೀರ್ಥಹಳ್ಳಿ: ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು

ಹಂಚಿಕೊಳ್ಳಿ
WhatsApp Facebook X Telegram
Thirthahalli Car Overturns Due to Heavy Rain
Thirthahalli Car Overturns Due to Heavy Rain

Thirthahalli Car Overturns ತೀರ್ಥಹಳ್ಳಿ: ತಾಲೂಕಿನ ಗಬಡಿ ಬಳಿ ಇಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ತುಂಬ ನೀರು ತುಂಬಿದ್ದರಿಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಂಭವಿಸಿದೆ.

ಶಿವಮೊಗ್ಗಕ್ಕೆ ಸಚಿವ ರಾಮಲಿಂಗಾ ರೆಡ್ಡಿ : ಯಾವಾಗ, ಕಾರಣವೇನು 

ಉಡುಪಿಯಿಂದ ಶಿವಮೊಗ್ಗಕ್ಕೆ ಸ್ವಿಫ್ಟ್ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ಸುರಿಯುತ್ತಿದ್ದ ಮಳೆಯಿಂದಾಗಿ ರಸ್ತೆಯ ಮೇಲೆ ನೀರು ಹರಿದು ಹೋಗುತ್ತಿತ್ತು, ಜೊತೆಗೆ ರಸ್ತೆಯ ತುಂಬಾ ಮಣ್ಣು ಸಹ ಕೂತಿತ್ತು. ಇದರಿಂದಾಗಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಕಾರಿನಲ್ಲಿದ್ದ ಇಬ್ಬರು ಮಹಿಳೆಯರನ್ನು ಬಸ್ಸಿನ ಮೂಲಕ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗುತ್ತಿದೆ.

ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾದ್ಯಂತ ಬಿಟ್ಟುಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಕಷ್ಟು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಮಳೆ ಪೀಡಿತ ಪ್ರದೇಶಗಳಲ್ಲಿ ಚಲಿಸುವಾಗ ಅತ್ಯಂತ ಎಚ್ಚರಿಕೆಯಿಂದ ಚಲಿಸಬೇಕು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor