ತೀರ್ಥಹಳ್ಳಿ: ತಾಲೂಕಿನ ನಂಟೂರು ಗ್ರಾಮದಲ್ಲಿ ನಾಡಬಾಂಬ್ ಸಿಡಿದು 72 ವರ್ಷದ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶಿವಮೊಗ್ಗ : ಗ್ಯಾಸ್ ಟ್ರಬಲ್ ನಡುವೆ ಸಿಲಿಂಡರ್ ಕಳ್ಳತನ
ಗಾಯಗೊಂಡ ವೃದ್ಧೆಯನ್ನು ಕಮಲಮ್ಮ (72) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾಡುಹಂದಿಗಳ ಶಿಕಾರಿಗಾಗಿ ಅಡಿಕೆ ತೋಟದಲ್ಲಿ ಅಡಿಕೆಯೊಳಗೆ ನಾಡಬಾಂಬ್ ಅಡಗಿಸಿಟ್ಟಿದ್ದರು ಎನ್ನಲಾಗಿದೆ. ಈ ವಸ್ತುವನ್ನು ನಾಯಿಯೊಂದು ಕಚ್ಚಿಕೊಂಡು ಬಂದು ಮನೆಯ ಅಂಗಳದಲ್ಲಿ ಹಾಕಿತ್ತು. ಅಂಗಳದಲ್ಲಿದ್ದ ಈ ವಸ್ತುವನ್ನು ಏನೋ ಎಂದು ಕುತೂಹಲದಿಂದ ಮುಟ್ಟಿದಾಗ ಅದು ಏಕಾಏಕಿ ಸ್ಫೋಟಗೊಂಡಿದೆ.
ಸ್ಫೋಟದ ತೀವ್ರತೆಗೆ ಕಮಲಮ್ಮ ಅವರ ಕೈ ಹಾಗೂ ಬೆರಳುಗಳಿಗೆ ಗಂಭೀರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ತೀರ್ಥಹಳ್ಳಿಯ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರಿಂದ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಈ ಘಟನೆಯ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Thirthahalli Elderly Woman Injured in Crude Bomb


Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
