ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: ಅರಿವಳಿಕೆ ತಜ್ಞರ ಹುದ್ದೆಗೆ ನೇರ ಸಂದರ್ಶನ

ಹಂಚಿಕೊಳ್ಳಿ
WhatsApp Facebook X Telegram
Shivamogga Job ಸಾಂದರ್ಭಿಕ ಚಿತ್ರ
Shivamogga Jobಸಾಂದರ್ಭಿಕ ಚಿತ್ರ

Thirthahalli ಶಿವಮೊಗ್ಗ: ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ತಜ್ಞ ವೈದ್ಯರ ಹುದ್ದೆಯನ್ನು ಭರ್ತಿ ಮಾಡಲು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯು ಪ್ರಕಟಣೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ವೈದ್ಯಕೀಯ ಅಭ್ಯರ್ಥಿಗಳಿಗೆ ನೇರ ಸಂದರ್ಶನದಮೂಲಕ ಸುವರ್ಣಾವಕಾಶ ಕಲ್ಪಿಸಲಾಗಿದೆ. 

ಶಿವಮೊಗ್ಗ : ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಸಮಿರಿಗೆ ರೇಖಾ ರಂಗನಾಥ್, ಸುನಿಲ್, ದೇವಂದ್ರಪ್ಪ!

ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಬೇಕಾಗುತ್ತದೆ. ಮೆರಿಟ್ ಮತ್ತು ಅರ್ಹತೆಯ ಮಾನದಂಡದ ಮೇಲೆ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುವುದು. ಆಯ್ಕೆಯಾಗುವ ತಜ್ಞ ವೈದ್ಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ನಿಯಮಾವಳಿ ಹಾಗೂ ಮಾರ್ಗಸೂಚಿಗಳ ಅನ್ವಯ ಆಕರ್ಷಕ ಸಂಭಾವನೆಯನ್ನು ಪಾವತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಜೂನ್ 24 ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಶಿವಮೊಗ್ಗದ ಬಿ.ಹೆಚ್. ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ಪ್ರಕ್ರಿಯೆ ಜರುಗಲಿದೆ. ಆಸಕ್ತರು ತಮ್ಮ ವಿದ್ಯಾರ್ಹತೆ, ವಯಸ್ಸಿನ ಪ್ರಮಾಣಪತ್ರ, ಮೀಸಲಾತಿ ದಾಖಲೆಗಳು ಸೇರಿದಂತೆ ಎಲ್ಲಾ ಮೂಲ ದಾಖಲಾತಿಗಳು, ಅವುಗಳ ಒಂದು ಸೆಟ್ ಜೆರಾಕ್ಸ್ ಪ್ರತಿ ಹಾಗೂ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಅಥವಾ 08182-222382 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್ ಕೆ ಎಸ್ ಮಾಹಿತಿ ನೀಡಿದ್ದಾರೆ.

Thirthahalli Government Hospital Recruitment 2026

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor