ತೀರ್ಥಹಳ್ಳಿ ಕೃಷಿಕರ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕವಿತಾ ಎಂ ಜೋಯ್ಸ್ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ 41 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಸಾವನ್ನಪ್ಪಿದರು. ಇವತ್ತು ಬೆಳಗ್ಗೆ ತೀರ್ಥಹಳ್ಳಿ ತಾಲ್ಲೂಕು ಕನ್ನಂಗಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ , ಬಂಧು ಮಿತ್ರರು , ನೆರೆಹೊರೆಯರು ಕುಟುಂಬಸ್ಥರು ಮೃತರ ಆತ್ಮಕ್ಕೆ ಶಾಂತಿ ಕೋರಿದರು.
thirthahalli : ಕೃಷಿಕರ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ಕವಿತಾ ಎಂ ಜೋಯ್ಸ್!
ಪಟ್ಟಣದ ಬಾಳೆಬೈಲು ಬಡಾವಾಣೆ ನಿವಾಸಿಯಾಗಿದ್ದ ಇವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಟಾಸ್ ಸಂಸ್ಥೆ ಅಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಟಾಸ್ ಸಂಸ್ಥೆಯ ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.