thirthahalli news ಜುಲೈ 03 ಮೇಗರವಳ್ಳಿಯಲ್ಲಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು
ಶಿವಮೊಗ್ಗ: ಕಳೆದ ನಾಲ್ಕು ದಿನಗಳಿಂದ ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹೆಗ್ಡೆಕೇರಿಯ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಹೆಗ್ಡೆಕೇರಿಯ ರಾಘವೇಂದ್ರ (40) ಎಂದು ಗುರುತಿಸಲಾಗಿದೆ.
ಕಾರ್ಮಿಕರಾಗಿದ್ದ ರಾಘವೇಂದ್ರ ಅವರು ಬುಧವಾರ ಸಂಜೆ ತೋಟವೊಂದಕ್ಕೆ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ, ಕಾಲು ಜಾರಿ ಅಲ್ಲೇ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.. ಇಂದು (ಗುರುವಾರ) ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ.

