thirthahalli news : ವಿ*ಷ ಸೇವಿಸಿ ತೀರ್ಥಹಳ್ಳಿ ಕಾಲೇಜಿನ ವಿಧ್ಯಾರ್ಥಿನಿ ಆತ್ಮಹ*ತ್ಯೆ
ತೀರ್ಥಹಳ್ಳಿ ತಾಲೂಕಿನ ಸರ್ಕಾರಿ ಪದವಿ ಕಾಲೇಜು ಒಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಶ್ವಿನಿ (19) ಮೃತಪಟ್ಟ ವಿಧ್ಯಾರ್ಥಿನಿಯಾಗಿದ್ದಾರೆ. ಘಟನೆ ನಡೆದ ಕೂಡಲೇ ಅಶ್ವಿನಿಯವರನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ದುರದೃಷ್ಟವಶಾತ್, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಅಶ್ವಿನಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.