ತೀರ್ಥಹಳ್ಳಿ: 34 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ, ಆತ ಮಾಡಿದ್ದಾದರೂ ಏನು? 

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

Thirthahalli Police ತೀರ್ಥಹಳ್ಳಿ: 34 ವರ್ಷಗಳಿಂದ ಕಾನೂನಿನ ಕಣ್ಣಿಗೆ ಮಣ್ಣೆರಚಿ ಪರಾರಿಯಾಗಿದ್ದ ಕಳ್ಳತನ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ನ್ಯಾಯಾಲಯದಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಮೂರು ಎಲ್‌ಪಿಆರ್  ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ.

ಶಿವಮೊಗ್ಗ : ಖಾಸಗಿ ಹೋಟೆಲ್​ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ? 

ಬಂಧಿತ ಆರೋಪಿಯನ್ನು ಸಾಗರ ಮೂಲದ ಶೇಖರ ಅಲಿಯಾಸ್ ಮತ್ತಿಗೆ ಶೇಖರ ಎಂದು ಗುರುತಿಸಲಾಗಿದೆ. ಈತನ ವಿರುದ್ಧ 1990ನೇ ಸಾಲಿನಲ್ಲಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂರು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಆದರೆ, ಅಂದಿನಿಂದಲೂ ಈತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದನು. ಆರೋಪಿ ಸಿಗದಿದ್ದಾಗ ನ್ಯಾಯಾಲಯವು ಈ ಮೂರೂ ಪ್ರಕರಣಗಳನ್ನು ಎಲ್‌ಪಿಆರ್ ಪಟ್ಟಿಗೆ ಸೇರಿಸಿ ವಿಚಾರಣೆ ನಡೆಸುತ್ತಿತ್ತು.

ಆರೋಪಿಯ ಸುಳಿವು ಬೆನ್ನತ್ತಿದ ತೀರ್ಥಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ತನಿಖಾ ತಂಡವು, ಕೊನೆಗೂ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಪ್ರಸ್ತುತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor