Thirthahalli Schools / june 27 / ತೀರ್ಥಹಳ್ಳಿಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ!

ಹಂಚಿಕೊಳ್ಳಿ
WhatsApp Facebook X Telegram
Heavy Rain Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report
Heavy Rain rain fall report

ತೀರ್ಥಹಳ್ಳಿಯಲ್ಲಿ ಮಳೆ ಆರ್ಭಟ: ಇಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! Thirthahalli Schools Closed Today June 27

ತೀರ್ಥಹಳ್ಳಿ, ಶಿವಮೊಗ್ಗ (ಜೂನ್ 27, 2025): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಇಂದು (ಜೂನ್ 27, 2025, ಶುಕ್ರವಾರ) ಸಹ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಹಾಗೆಯೇ ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ರಂಜಿತ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

Thirthahalli Schools rain fall report
rain fall report

Thirthahalli Schools Closed Today June 27

ತಾಲೂಕಿನಾದ್ಯಂತ ಮಳೆಯ ಜೊತೆಗೆ ಶೀತ ಗಾಳಿ ಸಹ ಬೀಸುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇಂತಹ ವಾತಾವರಣದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗುವುದನ್ನು ತಡೆಯುವ ಉದ್ದೇಶದಿಂದ ಈ ರಜೆಯನ್ನು ವಿಸ್ತರಿಸಲಾಗಿದೆ.

ಈಗ ಘೋಷಿಸಲಾಗಿರುವ ರಜೆಯನ್ನು ಮುಂದಿನ ದಿನಗಳಲ್ಲಿ ಭಾನುವಾರ ಸೇರಿದಂತೆ ರಜಾ ದಿನಗಳಲ್ಲಿ ಸರಿದೂಗಿಸಲು ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದು ತಹಸೀಲ್ದಾರ್ ರಂಜಿತ್ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

Thirthahalli Schools, Colleges Closed Today Due to Heavy Rains (June 27, 2025

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor