Thirthahalli theft case : ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಒಡೆದು ಹಣ ದೋಚಿದ ಕಳ್ಳರು
ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರು ಕಾಣಿಕೆ ಹುಂಡಿ ಒಡೆದು ಸಾವಿರಾರು ರೂಪಾಯಿ ಹಣವನ್ನು ದೋಚಿದ್ದಾರೆ.
ಮುಖಕ್ಕೆ ಮಾಸ್ಕ್ ಧರಿಸಿ ಬಂದಿದ್ದ ಕಳ್ಳರು ದೇವಸ್ಥಾನದ ಅನ್ನದಾಸೋಹ ಕೊಠಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಬೇರೆ ದಿಕ್ಕಿಗೆ ತಿರುಗಿಸಿ, ಬೀರುವಿನ ಬಾಗಿಲು ಮುರಿದಿದ್ದಾರೆ. ನಂತರ, ಕೊಠಡಿಯಲ್ಲಿದ್ದ ಎರಡು ಕಾಣಿಕೆ ಹುಂಡಿಗಳನ್ನು ಒಡೆದು ಹಣ ಕಳವು ಮಾಡಿ ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

