SHIVAMOGGA NEWS TODAY

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಹಸು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಮೂವರು ಆರೋಪಿಗಳು ಅರೆಸ್ಟ್

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ: ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ  ಪೊಲೀಸರು ಭೇದಿಸಿದ್ದಾರೆ. ವಿಶೇಷ ಕಾರ್ಯಾಚರಣೆಯ ಮೂಲಕ ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡುವಲ್ಲಿ ಪೊಲೀಸ್ ತಂಡ ಯಶಸ್ವಿಯಾಗಿದೆ.

ಪ್ರಕರಣದ ಹಿನ್ನೆಲೆ

ಕಳೆದ ಜನವರಿ 25ರಂದು ಮುಂಜಾನೆ ಕಟ್ಟೆಹಕ್ಕಲು ಸರ್ಕಲ್ ಬಳಿ ತುಂಬ್ರಿಮನೆಯ ದೇವರಾಜ ಎಂ.ಎಸ್. ಅವರಿಗೆ ಸೇರಿದ ಸುಮಾರು 12,000 ರೂ. ಮೌಲ್ಯದ ಹಸುವನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಹಸುವನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಕಾರಿನಲ್ಲಿ ಸಾಗಿಸಲಾಗಿತ್ತು. ಈ ಬಗ್ಗೆ ಜನವರಿ 27ರಂದು ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು.

ಬಂಧಿತರನ್ನು ಶಿವಮೊಗ್ಗದ ಆರ್.ಎಂ.ಎಲ್ ನಗರದ ಮುಬಾರಕ್ (25), ಟಿಪ್ಪುನಗರದ ಅಹ್ಮದ್ ಬೇಗ್ (25) ಮತ್ತು ಮುಕ್ರಮ ವುಲ್ಲಾ (21) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ರಿಡ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

Thirthahalli Three Arrested for Cattle Theft

Thirthahalli Three Arrested for Cattle Theft
Thirthahalli Three Arrested for Cattle Theft
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.