ಡಿಗ್ರಿ, ಡಿಪ್ಲೋಮೊ, ಐಟಿಐ, ಪಿಯುಸಿ ಎಸ್​ಎಸ್​ಎಲ್​ಸಿ ಓದಿದವರಿಗೆ ಉದ್ಯೋವಕಾಶ! ಶಿವಮೊಗ್ಗದಲ್ಲಿಯೇ ನಡೆಯಲಿದೆ ಉದ್ಯೋಗ ಮೇಳ! ವಿವರ ಓದಿ!

Those who have studied degree, diploma, ITI, PUC SSLC will get a job opportunity! Job fair to be held in Shimoga Read the details!

ಡಿಗ್ರಿ, ಡಿಪ್ಲೋಮೊ, ಐಟಿಐ, ಪಿಯುಸಿ ಎಸ್​ಎಸ್​ಎಲ್​ಸಿ ಓದಿದವರಿಗೆ ಉದ್ಯೋವಕಾಶ! ಶಿವಮೊಗ್ಗದಲ್ಲಿಯೇ ನಡೆಯಲಿದೆ ಉದ್ಯೋಗ ಮೇಳ! ವಿವರ ಓದಿ!

KARNATAKA NEWS/ ONLINE / Malenadu today/ May 29, 2023 SHIVAMOGGA NEWS

ಶಿವಮೊಗ್ಗ (jobs in shimoga)  ಜಿಲ್ಲಾ ಉದ್ಯೋಗ ವಿನಿಮಯ (job vacancy in shimoga) ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ  ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ಆಹ್ವಾನ

ಸಾಗರ /  ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಆಗಸ್ಟ್-2023 ನೇ ಸಾಲಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಈ.ವಿ., ಸಿ.ಎನ್.ಸಿ. ಇಂಡಸ್ಟ್ರಿಯಲ್ ರೋಬೊಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ವೃತ್ತಿಗಳಲ್ಲಿ ಲಭ್ಯವಿರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಸ್ಥೆಯ ವೆಬ್‍ಸೈಟ್ www.cite.karnataka.gov.in  ಮೂಲಕ ಹಾಗೂ ನೇರವಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕಾರ್ಗಲ್, ಸಾಗರ (ತಾ), ಇಲ್ಲಿ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಗಾಗಿ ಮೊ.ಸಂ.: 9880605897/ 8073009242/ 7899017818 ಗಳನ್ನು ಸಂಪರ್ಕಿಸುವುದು.