ಶಿವಮೊಗ್ಗಕ್ಕಿಂದು ಬರಲಿದ್ದಾರೆ ಮೂವರು ಸಚಿವರು ! ವಿಶೇಷ ಏನು? ವಿವರ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram

 

SHIVAMOGGA|  Jan 3, 2024  | ಶಿವಮೊಗ್ಗಕ್ಕೆ ಇಂದು ಸಚಿವ ಮಧು ಬಂಗಾರಪ್ಪ ಆಗಮಿಸಲಿದ್ದಾರೆ.  ಶಿವಮೊಗ್ಗದಲ್ಲಿ ಆಯೋಜಿಸಲು ಉದ್ದೇಶಿಸಿರುವ “ಯುವನಿಧಿ ಯೋಜನೆ” ಚಾಲನಾ ಕಾರ್ಯಕ್ರಮದ ಆಯೋಜನೆ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳ ಸಭಾಂಗಣ ಸಭೆಯು ನಡೆಯಲಿದೆ. ಬಳಿಕ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿಗೆ ಭೇಟಿಕೊಟ್ಟು ಅಲ್ಲಿಂದ   IndiGo ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ. 

ಯುವನಿಧಿ

ಇನ್ನೂ ಇದೇ ಸಭಯೆಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್, ರವರು ಸಹ ಪಾಲ್ಗೊಳ್ಳಲಿದ್ದಾರೆ. 

ಇನ್ನೂ ಕೌಶಲ್ಯಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತರಾದ ಡಾ. ಆರ್.ರಾಗಪ್ರಿಯಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. 

ಜನವರಿ 12 ರಂದು ಶಿವಮೊಗ್ಗದ ಫ್ರೀಡಂಪಾರ್ಕ್​ನಲ್ಲಿ  ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ಶಿವಮೊಗ್ಗದಿಂದ ಚಾಲನೆ ನೀಡಲಾಗುತ್ತಿದೆ.  

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor