SHIVAMOGGA NEWS TODAY

ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಎದುರು ಬಿಜೆಪಿ ಯುವ ಮೋರ್ಚಾ ಧಿಡೀರ್ ಪ್ರತಿಭಟನೆ: ನೆಮ್ಮದಿ ಕೇಂದ್ರಕ್ಕೆ ಮುತ್ತಿಗೆ ಎಚ್ಚರಿಕೆ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Tirthahalli BJP ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಬೆಳೆ ವಿಮೆ ಯೋಜನೆಯ ಲಾಭ ಪಡೆಯಲು ಮಳೆ ಮಾಪನ ಯಂತ್ರದ ದೋಷವೇ ರೈತರಿಗೆ ಮುಳುವಾಗಿದೆ ಎಂದು ಆರೋಪಿಸಿ, ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂಭಾಗ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯಿತಿ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ಹಾರಿಕೆ ಉತ್ತರಗಳ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಸ್ಥಳದಲ್ಲೇ ಧಿಡೀರ್ ಧರಣಿ ನಡೆಸಿ ರೈತರ ಪರವಾಗಿ ನ್ಯಾಯಕ್ಕೆ ಒತ್ತಾಯಿಸಿದರು. 

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​ ಓದಿ

ಈ ಸಂದರ್ಭದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗಬಡಿ ಮಾತನಾಡಿ ರೈತರ ಕಷ್ಟಕಾಲಕ್ಕೆ ನೆರವಾಗಲೆಂದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಬೆಳೆ ವಿಮೆ ಯೋಜನೆಯು ಆಯಾ ಭಾಗದ ಮಳೆಯ ಪ್ರಮಾಣವನ್ನು ಆಧರಿಸಿ ಕಾರ್ಯನಿರ್ವಹಿಸುತ್ತದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಮಳೆ ಮಾಪನ ಯಂತ್ರದ ವರದಿಯ ಆಧಾರದ ಮೇಲೆ ರೈತರಿಗೆ ಪರಿಹಾರ ಧನ ಬಿಡುಗಡೆಯಾಗುತ್ತದೆ. ಆದರೆ, ಬೆಜ್ಜವಳ್ಳಿ ಪಂಚಾಯಿತಿಯಲ್ಲಿ ಈ ಮಾಪನ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟಿದೆ ಎಂದರು,

ಅಷ್ಟೇ ಅಲ್ಲದೆ ಯಂತ್ರ ಹಾಳಾಗಿ ಒಂದು ವರ್ಷ ಕಳೆದಿದೆ. ಆದರೂ ಹಾಳಾಗಿರುವ ಮಳೆ ಮಾಪನ ಯಂತ್ರವನ್ನು ದುರಸ್ತಿ ಪಡಿಸದೆ ಈ ಸಾಲಿನಲ್ಲೂ ಇದೇ ತಾಂತ್ರಿಕ ದೋಷ ಮುಂದುವರಿದಿದೆ. ಇದನ್ನು ಗಮನಿಸಿದ ಪಂಚಾಯಿತಿಗೆ ಬೇಟಿನೀಡಿ ಅಧಿಕಾರಿಗಳನ್ನು ಪ್ರಶ್ನಿಸಿದಾಗ. ಈ ವೇಳೆ ಅಧಿಕಾರಿಗಳು ಸಮರ್ಪಕ ಪ್ರತಿಕ್ರಿಯೆ ನೀಡುತ್ತಿಲ್ಲ. ಮುಂಬರುವ ದಿನಗಳಲ್ಲೂ ರೈತರಿಗೆ ವಿಮೆ ಹಣ ಬರದೇ ಹೋದರೆ ರೈತರನ್ನು ಒಗ್ಗೂಡಿಸಿ ಸರ್ಕಾರಿ ನೆಮ್ಮದಿ ಕೇಂದ್ರಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು. 

ಈ ರೈತ ಪರ ಪ್ರತಿಭಟನೆಯ ನೇತೃತ್ವವನ್ನು ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಗಬಡಿ ವಹಿಸಿದ್ದರು. ಇವರೊಂದಿಗೆ ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಬ್ರಹ್ಮಣ್ಯ, ಪ್ರಮುಖರಾದ ಸಾತ್ವಿಕ ಉದಯಪುರ, ತನಿಕಲ್ ಪ್ರಸನ್ನ, ಸುದೀಪ್ ಒಳಗೇರಿ, ಸುದೀಪ್ ದಬ್ಬಣಗದ್ದೆ, ಪ್ರದೀಪ್ ಕೂಡಿಗೆ, ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

Tirthahalli BJP Yuva Morcha Protests At Bejjavalli GP

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.