SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 20, 2024 Bike Accident
ತಿರುಪತಿ ಲಡ್ಡು ವಿಚಾರದಲ್ಲಿ ವಿವಾದ ಭುಗಿಲೆದ್ದ ಬೆನ್ನಲ್ಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ಧಾರ್ಮಿಕ ಧತ್ತಿ ಇಲಾಖೆಯ ಅಡಿಯಲ್ಲಿನ ದೇವಾಲಯಗಳಲ್ಲಿ ನಂದಿನಿ ತುಪ್ಪವನ್ನ ಬಳಸುವಂತೆ ಸೂಚನೆ ಹೊರಡಿಸಲಾಗಿದೆ.

ಈ ಸಂಬಂಧ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದ್ದು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಇನ್ನುಮುಂದೆ ಶುದ್ಧ ನಂದಿನಿ ತುಪ್ಪ (Nandini ghee) ಬಳಸುವಂತೆ ಆದೇಶ ಹೊರಡಿಸಲಾಗಿದೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ.
hindu Religious and charitable endowments department orders use of Nandini pure ghee in government temples in the state
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ