Today 5 news/ ಭತ್ತಕ್ಕೆ ಈ ಸಲ ಸಿಕ್ಕ ಬೆಂಬಲ ಬೆಲೆ ಎಷ್ಟು? ಮಾಜಿ ಸೈನಿಕರಿಗೆ ದೃಢೀಕರಣದ ಸುದ್ದಿ, ಮಕ್ಕಳ ವಿಚಾರದಲ್ಲಿ ಈ ಎಚ್ಚರಿಕೆ ಕಡ್ಡಾಯ!?

Today 5 news/ What is the support price for paddy this time? News of confirmation for ex-servicemen, this warning is mandatory in case of children!?

Today 5 news/ ಭತ್ತಕ್ಕೆ ಈ ಸಲ ಸಿಕ್ಕ ಬೆಂಬಲ ಬೆಲೆ ಎಷ್ಟು? ಮಾಜಿ ಸೈನಿಕರಿಗೆ  ದೃಢೀಕರಣದ ಸುದ್ದಿ, ಮಕ್ಕಳ ವಿಚಾರದಲ್ಲಿ ಈ ಎಚ್ಚರಿಕೆ ಕಡ್ಡಾಯ!?
Today 5 news/ ಭತ್ತಕ್ಕೆ ಈ ಸಲ ಸಿಕ್ಕ ಬೆಂಬಲ ಬೆಲೆ ಎಷ್ಟು? ಮಾಜಿ ಸೈನಿಕರಿಗೆ ದೃಢೀಕರಣದ ಸುದ್ದಿ, ಮಕ್ಕಳ ವಿಚಾರದಲ್ಲಿ ಈ ಎಚ್ಚರಿಕೆ ಕಡ್ಡಾಯ!?

MALENADUTODAY.COM/ SHIVAMOGGA / KARNATAKA WEB NEWS  

ಭತ್ತಕ್ಕೆ ಬೆಂಬಲ ಬೆಲೆ ರೈತರಿಂದ ಖರೀದಿ ಅವಧಿ ವಿಸ್ತರಣೆ

2022-23ನೇ ಸಾಲಿನ ಮುಂಗಾರುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭತ್ತ ಖರೀದಿಸಲು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. 

ಪ್ರತಿ ಎಕರೆಗೆ 25 ಕ್ವಿಂಟಾಲ್‍ನಂತೆ ಹಾಗೂ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಸಾಮಾನ್ಯ ಭತ್ತಕ್ಕೆ  ರೂ. 2040/- ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 2060/- ನಿಗಧಿಪಡಿಸಲಾಗಿದ್ದು, ರೈತರಿಂದ ಭತ್ತ ಖರೀದಿಸುವ ಅವಧಿಯನ್ನು ಏ. 30ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ರೈತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ  ಹಾಗೂ ಹೆಚ್ಚಿನ ಮಾಹಿತಿಗಾಗಿ ಈಗಾಗಲೇ ತಾಲೂಕು ಎ.ಪಿ.ಎಂ.ಸಿ. ಯಾರ್ಡ್‍ಗಳಲ್ಲಿ ತೆರೆಯಲಾಗಿರುವ ಭತ್ತ ಖರೀದಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ  

ಸಾಗರ ವಿಧಾನಸಭಾ ಚುನಾವಣೆ : ಒಂದು ನಾಮಪತ್ರ ಸಲ್ಲಿಕೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ (karnataka election 2023) ಸಾಗರ ಕ್ಷೇತ್ರದಿಂದ ಆಯ್ಕೆ ಬಯಸಿ ಪಕ್ಸೇತರ ಅಭ್ಯರ್ಥಿಯಾಗಿ ಟಿ.ಎನ್. ಶ್ರೀನಿವಾಸ್ ಅವರು ಸಾಗರ ಚುನಾವಣಾಧಿಕಾರಿಗಳಿಗೆ ಒಂದು ನಾಮಪತ್ರವನ್ನು ಸಲ್ಲಿಸಿದರು. ಉಳಿದಂತೆ ಜಿಲ್ಲೆಯ ಬೇರೆ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಇದರಿಂದಾಗಿ ಈವರೆಗೆ ಒಟ್ಟು 01ನಾಮಪತ್ರ ಸಲ್ಲಿಕೆ ಆದಂತಾಗಿದೆ.

ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡರೆ ಸೂಕ್ತ ಕ್ರಮ

 2023 ಸಾರ್ವತ್ರಿಕ ವಿಧಾನಸಭ ಚುನಾವಣೆಯಲ್ಲಿ ಮಕ್ಕಳ ದುರುಪಯೋಗ ತಡೆ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ತನ್ನ ಅಧಿನಿಯಮ 2005 ರ ಕಲಂ 13 ರನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಹಾಗೂ ಕಲಂ 14 ರಡಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯವು ನಿರ್ವಹಿಸುವ ಅಧಿಕಾರವನ್ನು ಹೊಂದಿರತ್ತದೆ.

ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆಯಾದ  ಪ್ರಕರರಣಗಳಿಗೆ ಸಂಬಂಧಿಸಿದಂತೆ ಆಯೋಗವು ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವ ಕಾರ್ಯ ವ್ಯಾಪ್ತಿ ಹೊಂದಿರುತ್ತದೆ.

ಆದ್ದರಿಂದ ರಾಜ್ಯದಲ್ಲಿ ನಡೆಯುವ ಚುನಾವಣಾ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ಮಕ್ಕಳನ್ನು ಬಳಸಿಕೊಳ್ಳುವುದನ್ನು, ಆಮಿಷಗಳನ್ನು ಒಡ್ಡುವುದು ಮತ್ತು ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದೆ. ಆದಾಗ್ಯೂ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು, ಆಮಿಷ ಒಡ್ಡುವುದು, ಉಡುಗೊರೆ ನೀಡುವುದು, ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕು ಉಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಬಳಸಿಕೊಂಡಿರುವುದು ಕಂಡುಬಂದಿದ್ದಲ್ಲಿ ಅಂತಹವರ ವಿರುದ್ದ ಮಕ್ಕಳ ಹಕ್ಕುಗಳ ಉಲ್ಲಂಘನೆ ಮತ್ತು ವಿಶ್ವಸಂಸ್ಥೆಯ ಮಕ್ಕಲ ಹಕ್ಕುಗಳ ಒಡಂಬಡಿಕೆಯ ಕಲಂ 32, 36 ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) ಮತ್ತು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ-2018 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಸೈನಿಕ ದೃಢೀಕರಣ ಪತ್ರ ಪಡೆಯಲು ಸೂಚನೆ

ಸಿ.ಇ.ಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಮಾಜಿ ಸೈನಿಕ ಮೀಸಲಾತಿ ಕೋರಿರುವರು ಮಾಜಿ ಸೈನಿಕರ ಮಕ್ಕಳು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಪಡೆಯಬೇಕಾಗಿರುತ್ತದೆ ಹಾಗೂ ಈ ದೃಢೀಕರಣ ಪತ್ರವನ್ನು ವಿಶೇಷ ವರ್ಗ(ಸ್ಪೆಷಲ್ ಕೆಟಗರಿ)ಗಳ ದಾಖಲೆ ಮಂಡನೆ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.  ಪ್ರಸ್ತುತ ಸರ್ಕಾರಿ ನೌಕರರು/ಅಧಿಕಾರಿಗಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಳ್ಳಬಹುದಾದ ಕಾರಣಗಳಿಂದ ಸಿ.ಇ.ಟಿ / ನೀಟ್ ನಲ್ಲಿ ಮಾಜಿ ಸೈನಿಕ(ಎಕ್ಸ್ ಡಿಫೆನ್ಸ್) ಮೀಸಲಾತಿ ಕೋರಿರುವ ಎಲ್ಲಾ ಮಾಜಿ ಸೈನಿಕರು ಕೊನೆಯ ದಿನಾಂಕದವರೆಗೆ ಕಾಯದೇ ಕೂಡಲೇ ಮಾಜಿ ಸೈನಿಕ ದೃಢೀಕರಣ ಪತ್ರವನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಿಂದ ಪಡೆದುಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ. ಸಿ.ಎ ಹಿರೇಮಠ ತಿಳಿಸಿದ್ದಾರೆ.

ಇದನ್ನು ಸಹ ಓದಿ

Read /ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​  ನೇಮಕ

Read /ಮತದಾನ  ಮತ್ತು ಮತದಾರ ಜಾಗೃತಿಗಾಗಿ ಶಿವಮೊಗ್ಗ ನಗರ ಪಾಲಿಕೆಯ ವಿಶಿಷ್ಟ ಪ್ರಯತ್ನ 

Read / ಬಿಎಸ್​ವೈ ರೂಲ್ಸ್​, ಈಶ್ವರಪ್ಪನವರಿಗೂ ಅಪ್ಲೆಯಾಯ್ತಾ? ಕೆ.ಇ.ಕಾಂತೇಶ್​ ಮಾಜಿ  ಸಿಎಂ ಯಡಿಯೂರಪ್ಪರನ್ನ ಭೇಟಿಯಾಗಿದ್ದೇಕೆ? 

Read / BREAKING NEWS/  ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/  ಸೆರೆಯಾಗಿದ್ದೇಗೆ  ವೈಲ್ಡ್ ಟಸ್ಕರ್​!

Read / Election code of conduct/ ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿ  9.5 KG  ಚಿನ್ನ ಜಪ್ತಿ! ಯಾರದ್ದು ಇಷ್ಟೊಂದು ಬಂಗಾರ? 

Read / ತಂದೆ ಕೈಯಲ್ಲಿ ಮಗುವಿನ ಸಾವು ತಂದಿಟ್ಟ ವಿಧಿ!  ಸಣ್ಣ ಅಸಡ್ಡೆಗೆ  ಜೀವವೇ ಹೋಯಿತೆ?  ಪೋಷಕರೇ  ಪ್ಲೀಸ್​ ಎಚ್ಚರ ವಹಿಸಿ! 

Read / ಶಿವಮೊಗ್ಗದ ಹೋಟೆಲ್​ ವಿರುದ್ಧ ಕೇಸ್​ ಗೆದ್ದ ಬೆಂಗಳೂರು ಗಾಂಧಿ ಬಜಾರ್​ನ ವಿದ್ಯಾರ್ಥಿ ಭವನ 

Read / ಶಿವಮೊಗ್ಗ ಬಿಜೆಪಿ, ಕಾಂಗ್ರೆಸ್​, ಜೆಡಿಎಸ್​ ಮತ್ತು ನಾಲ್ಕನೇ ‘ಪ್ರಬಲ’ ಅಭ್ಯರ್ಥಿ ಯಾರು? 

Read/ ಶಿವಮೊಗ್ಗ ಬಳಿಕ ಸಾಗರ ಸಂಚಲನ/  ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ? 

ನಮ್ಮ ಸೋಶೀಯಲ್​ ಮೀಡಿಯಾ ಲಿಂಕ್​ಗಳು ಕ್ಲಿಕ್  ಮಾಡಿ 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS/ 

kannada news live, kannada news paper, kannada news channel, kannada news today, kannada news channel live,kannada news live today, live,kannada news, kannada news app, kannada news bangalore, today kannada news, kannada news dharwad, kannada news davangere,kannada news epaper today,kannada news dailyhunt,  firstnews kannada,  Shivamogga today,  shivamogga news, shivamogga live,  shivamoggavarte , shivamogga times news, shivamogga live, malnad news, malnadlive, shivamogga latest news #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News