today CM program?: ಇವತ್ತು ಶಿವಮೊಗ್ಗಕ್ಕೆ ಬರುತ್ತಿಲ್ಲ ಸಿಎಂ & ಡಿಸಿಎಂ

Malenadu Today
ಅಂದುಕೊಂಡಂತೆ ಆಗಿದ್ದರೆ, ಇವತ್ತು ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸುವ ಸಲುವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬರಬೇಕಿತ್ತು. ಆದರೆ ಇದೀಗ ಅವರ ಪ್ರವಾಸ ರದ್ದಾಗಿದೆ.

today CM program visit shivamogga cancel

ಸಿಎಂ ಹಾಗೂ ಡಿಸಿಎಂ ಇಬ್ಬರು ಚಿಕ್ಕಮಗಳೂರಿನಲ್ಲಿ ಮದುವೆಯ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಶಿವಮೊಗ್ಗಕ್ಕೆ ಬರುವವರಿದ್ದರು. ಆದರೆ  ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಇಂದಿನ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಪ್ರವಾಸ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ. 

Share This Article