today court news : ಕುಂಬಾರ ಗುಂಡಿಯಲ್ಲಿ ಮಾಲು ಸಮೇತ ಸಿಕ್ಕಿಬಿದ್ದ ಕೇಸ್ | ಇಬ್ಬರಿಗೆ ಶಿಕ್ಷೆ
ಶಿಕಾರಿಪುರ: ಕುಂಬಾರ ಗುಂಡಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ. ಯಾಸಿರ್ ಪಾಷಾ (27) ಹಾಗೂ ಸಾನಿಯಾ ಬೇಗಂ (52) ಶಿಕ್ಷೆಗೆ ಒಳಗಾದ ಆರೋಪಿಗಳು.
today court news : 2021ರ ಡಿಸೆಂಬರ್ 5 ರಂದು. ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರ ಗುಂಡಿ ಏರಿಯಾದಲ್ಲಿ . ಯಾಸಿರ್ ಪಾಷಾ ಹಾಗೂ ಸಾನಿಯಾ ಬೇಗಂ ಮಾದಕ ದ್ರವ್ಯ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ, ಶಿಕಾರಿಪುರ ಟೌನ್ ಪೊಲೀಸ್ ಠಾಣೆಯ ಪಿ.ಎಸ್.ಐ ಪ್ರಶಾಂತ್ ಕುಮಾರ್, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ನಂತರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸುರೇಶ್ ಕುಮಾರ್ ಎ. ಎಂ. ಅವರು ವಾದ ಮಂಡಿಸಿದರು. ವಿಚಾರಣೆ ನಡೆದ ನಂತರ ಯಾಸಿರ್ ಪಾಷಾ ಎಂಬಾತನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ದಂಡ, ಹಾಗೂ ಶಹಜಾನ್ @ ಸಾನಿಯಾ ಬೇಗಂ (52) ಎಂಬಾಕೆಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.
