Today news: ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದ ವ್ಯಕ್ತಿ : ನಂತರ ಆಗಿದ್ದೇನು
ಶಿವಮೊಗ್ಗ: ಬೆಂಗಳೂರಿನಿಂದ ಜೋಗಕ್ಕೆ ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ಕಾರ್ಗಲ್ ಪೊಲೀಸ್ ಠಾಣೆಯ ಪಿಎಸ್‌ಐ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದಿದ್ದ ವ್ಯಕ್ತಿಯನ್ನು ಕಾರ್ಗಲ್ ಠಾಣೆಯ ಪಿಎಸ್‌ಐ ಗಮನಿಸಿದ್ದಾರೆ. ಕೂಡಲೇ ಅವರು ಆ ವ್ಯಕ್ತಿಯೊಂದಿಗೆ ಮಾತನಾಡಿ, ಧೈರ್ಯ ತುಂಬಿ ಸಮಾಧಾನಪಡಿಸಿದ್ದಾರೆ. ಅವರ ಮನವೊಲಿಸಿ, ಪೋಷಕರನ್ನು ಸಂಪರ್ಕಿಸಿದ್ದಾರೆ. ನಂತರ ಆ ವ್ಯಕ್ತಿಯನ್ನು ಸುರಕ್ಷಿತವಾಗಿ ಅವರ ಮನೆಗೆ ವಾಪಸ್ ಕಳುಹಿಸಿಕೊಟ್ಟಿದ್ದಾರೆ.
ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆ ಮತ್ತು ಮಾನವೀಯ ಕಾರ್ಯದಿಂದಾಗಿ ಒಂದು ಜೀವ ಉಳಿದಿದೆ.
