ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ : ಗುರುವಿಗೆ ಮಹತ್ವದ ಸ್ಥಾನ

prathapa thirthahalli
Prathapa thirthahalli - content producer

Today news : ಶಿವಮೊಗ್ಗ: ಸಮಾಜದಲ್ಲಿಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗರೆಡ್ಡಿ ಹೇಳಿದರು.

Today news  ತಾಲೂಕಿನ ಸಂತೆಕಡೂರಿನ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿಪೋಷಕರ ಸಂಘದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಹಿಂದಿನ ಕಾಲಕ್ಕೆ ಹೋಲಿಸಿದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿಬಹಳಷ್ಟು ಬದಲಾವಣೆಗಳಾಗಿವೆ. ಆದರೆ, ಗುರುವಿನ ಸ್ಥಾನ ಯಾವತ್ತಿಗೂ ಮಹತ್ವಪೂರ್ಣವಾಗಿಯೇ ಇದೆ. ಗುರುವಿನ ಮಾರ್ಗದರ್ಶನದಲ್ಲಿಮುನ್ನಡೆದವರು ಯಶಸ್ಸು ಗಳಿಸುತ್ತಾರೆ. ಕೇಂದ್ರೀಯ ವಿದ್ಯಾಲಯ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿಶಿಕ್ಷಣ ಎಂಬುದು ನಾಲ್ಕು ಗೋಡೆಗಳ ನಡುವಿನ ಕೊಠಡಿಗೆ ಸೀಮಿತವಾಗಿಲ್ಲ. ದೇಶ ಮತ್ತು ಜಗತ್ತಿನ ದರ್ಶನ ಮಾಡಿಸುವ ಶೈಕ್ಷಣಿಕ ವ್ಯವಸ್ಥೆ ಕೇಂದ್ರೀಯ ವಿದ್ಯಾಲಯದ್ದು ಎಂದರು.

ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಪೋಷಕರ ಸಂಘದ ಅಧ್ಯಕ್ಷ ಆರಗ ರವಿ ಮಾತನಾಡಿ, ದೇಶದ ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯದಲ್ಲಿವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಉದ್ದೇಶದಿಂದ ಪೋಷಕರ ಸಂಘವನ್ನು ಸ್ಥಾಪಿಸಲಾಗಿದೆ. ಶಾಲೆಗೆ ಅಗತ್ಯವಿರುವ ಮೂಲಸೌಲಭ್ಯ ಒದಗಿಸಲು ಸಂಸದರು, ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಇತಿಹಾಸದಲ್ಲಿಇದೇ ಮೊದಲ ಬಾರಿಗೆ ಪೋಷಕರ ಸಂಘವನ್ನು ಸ್ಥಾಪಿಸಲಾಗಿದೆ. ಪೋಷಕರ ಸಂಘದಿಂದಲೇ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿ ಶಿಕ್ಷಕರು, ಸಿಬ್ಬಂದಿಯನ್ನು ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದು ಸಂಘದ ಉದ್ದೇಶವಾಗಿದೆ ಎಂದರು.

ಪ್ರಭಾರಿ ಪ್ರಾಂಶುಪಾಲ ಕೆ.ಬಿ.ಸುಬ್ರಹ್ಮಣ್ಯ ಶರ್ಮಾ ಮಾತನಾಡಿ, ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಇತಿಹಾಸದಲ್ಲಿಇದೊಂದು ಐತಿಹಾಸಿಕ ಕಾರ‍್ಯಕ್ರಮ. 38 ವರ್ಷಗಳ ನನ್ನ ಸೇವೆಯಲ್ಲಿಪೋಷಕರೇ ಶಿಕ್ಷಕರನ್ನು ಗೌರವಿಸುತ್ತಿರುವ ಮೊದಲ ಕಾರ‍್ಯಕ್ರಮ ಇದು. ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಗೌರವಿಸುವುದರಿಂದ ಅವರಲ್ಲಿಹೊಸ ಚೈತನ್ಯ ಮೂಡುವ ಜತೆಗೆ ಜವಾಬ್ದಾರಿ ಹೆಚ್ಚಾಗುತ್ತದೆ. ಕಳೆದ ಸಾಲಿನಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಶೇ.100 ಫಲಿತಾಂಶ ಬಂದಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಗತಿಗೆ ಶಿಕ್ಷಕರು ಕಾಳಜಿ ವಹಿಸುತ್ತಿದ್ದಾರೆ. ಗುರುವೃಂದ ಹಾಗೂ ಸಿಬ್ಬಂದಿಯನ್ನು ಗೌರವಿಸುವ ಮೂಲಕ ಪೋಷಕರು ಕೂಡ ಶಾಲೆಯ ಅಭಿವೃದ್ಧಿಗೆ ಮುಂದಾಗಿರುವುದು ಹೆಮ್ಮೆ ತಂದಿದೆ ಎಂದರು.

ಹಿರಿಯ ಶಿಕ್ಷಕಿ ಭಾವನ ಸಿಂಗ್‌ ಕೃತಜ್ಞತೆ ಸಲ್ಲಿಸಿದರು. ಶಾಲೆಯ ಶಿಕ್ಷಕ ವರ್ಗ, ಸಿಬ್ಬಂದಿಯನ್ನು ಪೋಷಕರ ಸಂಘದಿಂದ ಗೌರವಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ‍್ಯಕ್ರಮ ನಡೆಸಿಕೊಟ್ಟರು. ಸಂಘದ ಪದಾಧಿಕಾರಿಗಳಾದ ಪ್ರಿಯಾ, ಪ್ರಶಾಂತ್‌, ತೇಜಸ್ವಿನಿ, ರಾಘವೇಂದ್ರ, ಗೋವಿಂದರಾಜ್‌ ಸನ್ಮಾನ ಕಾರ‍್ಯಕ್ರಮ ನಡೆಸಿಕೊಟ್ಟರು. ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಪೋಷಕರ ಸಂಘದ ಪ್ರಧಾನ ಕಾರ‍್ಯದರ್ಶಿ ಗೋಸಲ್‌ ಬಸವರಾಜ್‌ ಸ್ವಾಗತಿಸಿದರು. ನಿರ್ದೇಶಕರಾದ ನಂದಿನಿ ನಿರೂಪಿಸಿ, ಚೈತ್ರ ವಂದಿಸಿದರು.

Today news

TAGGED:
Share This Article