ಕೊಯಿಲಿಗೆ ಸಿದ್ದರಾಗುತ್ತೀದ್ದೀರಾ | ಎಚ್ಚರವಹಿಸಿ | ಇನ್ನೆರಡು ದಿನ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸಾಧ್ಯತೆ

Mysuru, Chamarajanagar, Shivamogga, Chikkamagaluru, Hassan, Kodagu and Mandya districts receive rainfall

ಕೊಯಿಲಿಗೆ ಸಿದ್ದರಾಗುತ್ತೀದ್ದೀರಾ | ಎಚ್ಚರವಹಿಸಿ | ಇನ್ನೆರಡು ದಿನ ಈ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಸಾಧ್ಯತೆ
Mysuru, Chamarajanagar, Shivamogga, Chikkamagaluru, Hassan, Kodagu ,Mandya districts receive rainfall

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 2, 2024 ‌ 

ಡಿಸೆಂಬರ್‌ 5 ರವರೆಗೂ ಚಂಡಮಾರುತ ಅಬ್ಬರದ ಕಾರಣಕ್ಕೆ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆ ಮುಂದುವರಿಯಲಿದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ 

ಇವತ್ತು ಅಂದರೆ, 02 ಡಿಸೆಂಬರ್ 2024 ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. 

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ನಾಳೆ ದಿನ ಅಂದರೆ 03 ಡಿಸೆಂಬರ್ 2024 ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಉಳಿದ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ.

SUMMARY |  Mysuru, Chamarajanagar, Shivamogga, Chikkamagaluru, Hassan, Kodagu and Mandya districts receive rainfall

KEY WORDS  | Mysuru, Chamarajanagar, Shivamogga, Chikkamagaluru, Hassan, Kodagu ,Mandya districts receive rainfall