today shivamogga news 17-06-25 ಭದ್ರ ಎಡದಂಡೆ ನಾಲೆಯಲ್ಲಿ ಒಂದೂವರೆ ತಿಂಗಳು ನೀರು ಬಂದ್ | ಕಾರಣವೇನು

prathapa thirthahalli
Prathapa thirthahalli - content producer

today shivamogga news ಭದ್ರ ಎಡದಂಡೆ ನಾಲೆಯಲ್ಲಿ ಒಂದೂವರೆ ತಿಂಗಳು ನೀರು ಬಂದ್ | ಕಾರಣವೇನು

today shivamogga news ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸುವ ಸಲುವಾಗಿ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು ಭದ್ರಾವತಿ  ಕಾರ್ಯಪಾಲಕ ಇಂಜಿನಿಯರ್ ಇವರ ವರದಿಯಂತೆ  ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸುವ ಸಲುವಾಗಿ ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದೆ. ಆದ್ದರಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.  

- Advertisement -

ಆದ್ದರಿಂದ ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟುದಾರರು ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅವಲಂಬಿತ ಬೆಳೆಗಳನ್ನು ಬೆಳೆಯಬಾರದು. ಒಂದು ವೇಳೆ ಬೆಳೆಗಳನ್ನು ಬೆಳೆದು ನಾಲೆಯಿಂದ ನೀರು ಸಿಗದೇ ಬೆಳೆ ನಷ್ಟವಾದಲ್ಲಿ ನೀರಾವರಿ ಇಲಾಖೆಯು ಯಾವುದೇ ರೀತಿಯಲ್ಲಿಯೂ ಜವಾವಾಬ್ದಾರಿಯಾಗುವುದಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲ ತಿಳಿರುತ್ತಾರೆ. 

 

Share This Article
Leave a Comment

Leave a Reply

Your email address will not be published. Required fields are marked *