today weather bangalore ಮಾನ್ಸೂನ್ ವಾಡಿಕೆಗೂ ಮೊದಲೇ ಆಗಮಿಸುವ ಸೂಚನೆ ಸಿಕ್ಕಿದ್ದು, ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗವೂ ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ. 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇವತ್ತು ಅಂದರೆ ಮೇ 13 ರಿಂದ ನೈಋತ್ಯ ಮಾನ್ಸೂನ್ ಅಂಡಮಾನ್ ಸಮುದ್ರದ ಕಡೆಗೆ ಬೀಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ today weather bangalore
ಕೋಲಾರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಇವತ್ತು ಮಳೆಯಾಗುವ ಸೂಚನೆ ಇದೆ. ಇದೇ ಸಂಧರ್ಭದಲ್ಲಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಗಾಳಿ (40-50 kmph) ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಡೈಲಿ ಬುಲೆಟಿನ್ನಲ್ಲಿ ಹೇಳಲಾಗಿದೆ.

ಇನ್ನೂ ನಾಳೆ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ / ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಆಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಹಗುರದಿಂದ ಸಾಧಾರಣ ಬೀಳುವ ಸಾಧ್ಯತೆ ಇದೆ.

today weather bangalore