Tomarrow holiday ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ಶಿವಮೊಗ್ಗದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ, ಆಗಸ್ಟ್ 18, 2025ರಂದು ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಗುರುದತ್ ಹೆಗಡೆ ಈ ಆದೇಶ ಹೊರಡಿಸಿದ್ದು, ಮಳೆಯಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರದಂದು ಸರಿದೂಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


