ಸೆಪ್ಟಂಬರ್​ 06 ರಂದು ಶಿವಮೊಗ್ಗನಗರದಲ್ಲಿ ಸಂಚಾರ ಬದಲಾವಣೆ : ಕಾರಣವೇನು

This Article Written by / Prathapa thirthahalli / ಆಗಷ್ಟ್ 26, 2025

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

Traffic Diversion ಸೆಪ್ಟೆಂಬರ್ 6, 2025 ರಂದು ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರದ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಈ ಕುರಿತು ಪೊಲೀಸ್ ಅಧೀಕ್ಷಕರು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ಮಾರ್ಗ ಬದಲಾವಣೆ ಮಾಡಲಾಗಿದೆ.

ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್. ಸರ್ಕಲ್, ಎ.ಎ. ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ ಸರ್ಕಲ್, ಡಿ.ವಿ.ಎಸ್. ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಬಳಿ ಇರುವ ತುಂಗಾ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.

Traffic Diversion ಸಂಚಾರ ನಿಷೇಧ ಮತ್ತು ಮಾರ್ಗ ಬದಲಾವಣೆ ವಿವರಗಳು:

ಮೆರವಣಿಗೆ ಮಾರ್ಗ ಮತ್ತು ಅದರ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ನಿಲುಗಡೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್. ಪುರ ಮತ್ತು ಚಿತ್ರದುರ್ಗ-ಹೊಳೆಹೊನ್ನೂರಿನಿಂದ ಬರುವ ಎಲ್ಲಾ ಭಾರಿ ವಾಹನಗಳು, ಬಸ್ಸುಗಳು ಮತ್ತು ಕಾರುಗಳು ಎಂ.ಆರ್.ಎಸ್. ಸರ್ಕಲ್‌ನಿಂದ ಬೈಪಾಸ್ ರಸ್ತೆ ಮೂಲಕ ಸಂಚರಿಸಬೇಕು.

ಹೊನ್ನಾಳಿ, ಹರಿಹರ ಮತ್ತು ದಾವಣಗೆರೆಯಿಂದ ಬರುವ ಭಾರಿ ವಾಹನಗಳು ಮತ್ತು ಬಸ್ಸುಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮೂಲಕ ಹೋಗಬೇಕು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಕಡೆಗೆ ಹೋಗುವ ಬಸ್ಸುಗಳು ಮತ್ತು ಭಾರಿ ಸರಕು ವಾಹನಗಳು ಸಾಗರ ರಸ್ತೆ, ಹೆಲಿಪ್ಯಾಡ್ ಸರ್ಕಲ್, ಅಯ್ಯೋಳ ಸರ್ಕಲ್, ಪೊಲೀಸ್ ಚೌಕಿ, ರಾಜ್‌ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮಾರ್ಗವಾಗಿ ಸವಳಂಗ ರಸ್ತೆ ಮೂಲಕ ಸಂಚರಿಸಬೇಕು.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು ಮತ್ತು ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ, ಎಂ.ಆರ್.ಎಸ್. ಸರ್ಕಲ್ ಮೂಲಕ ಹೋಗಬೇಕು.

ಶಿಕಾರಿಪುರ, ಸೊರಬ ಮತ್ತು ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೋಗುವ ಬಸ್ಸುಗಳು ಹಾಗೂ ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಮ್ ಸರ್ಕಲ್, ಲಕ್ಷ್ಮಿ ಟಾಕೀಸ್ ಸರ್ಕಲ್, ಪೊಲೀಸ್ ಚೌಕಿ, ಅಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸಬೇಕು.

ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

Traffic Diversion  ಪೊಲೀಸ್ ವಾಹನಗಳು, ವಿಐಪಿ ವಾಹನಗಳು, ಆಂಬುಲೆನ್ಸ್ ಮತ್ತು ಮೂಲಭೂತ ಸೌಕರ್ಯ ಒದಗಿಸುವ ವಾಹನಗಳಿಗೆ ಈ ನಿಯಮದಿಂದ ವಿನಾಯಿತಿ ನೀಡಲಾಗಿದೆ. 

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment