ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಭೀಕರ ಘಟನೆ, ಕಾರ್ಕಳ ವಿದ್ಯಾರ್ಥಿನಿ ಸಾವು! ಇನ್ನೊಬ್ಬಾಕೆ ಸ್ಥಿತಿ ಗಂಭೀರ

ಹಂಚಿಕೊಳ್ಳಿ
WhatsApp Facebook X Telegram
tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.
tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.

ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ / ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಇವತ್ತು ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೀರಿನ ಟ್ಯಾಂಕರ್ ಹಾಗೂ ಜುಪಿಟರ್ ಸ್ಕೂಟಿ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಸ್ಕೂಟಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.
tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.

ಶಿವಮೊಗ್ಗಕ್ಕೆ ಮಣ್ಣು ಸಾಗಿಸ್ತಿದ್ದಾಗ ಮೇಲೆ ಕೆಳಗಾಗಿ ರಸ್ತೆ ಬದಿ ಬಿದ್ದ ಲಾರಿ!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳಾ ಗ್ರಾಮದ ಲಾವಣ್ಯ (25) ಮೃತಪಟ್ಟ ದುರ್ದೈವಿ. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಪಿಡಿಯಾಟ್ರಿಕ್ ಪಿಜಿ ವ್ಯಾಸಂಗ ಮಾಡುತ್ತಿದ್ದ ಲಾವಣ್ಯ ಕಾರ್ಕಳ ಮೂಲದ ಸತೀಶ್ ಮತ್ತು ಸುನೀತಾ ದಂಪತಿಯ ಪುತ್ರಿ. ಇವತ್ತು ಅವರು ಆಸ್ಪತ್ರೆಯಿಂದ ಹಾಸ್ಟೆಲ್‌ಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಬೆಂಗಳೂರಿನ ಜೆಪಿ ನಗರ ಮೂಲದ ಓವೇರಿಯಾ ಎಂಬ ವಿದ್ಯಾರ್ಥಿನಿ ಗಾಯಗೊಂಡಿದ್ದು, ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓವೇರಿಯಾ ಅವರು ಅಂತಿಮ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. 

21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ನೀರು ಪೂರೈಕೆ ಮಾಡುತ್ತಿದ್ದ ಟ್ಯಾಂಕರ್ ಈ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಶಿವಮೊಗ್ಗದ ಕೋಟೆಗಂಗೂರು ಮೂಲದ ಈ ವಾಟರ್ ಟ್ಯಾಂಕರ್ ವಿದ್ಯಾರ್ಥಿನಿಯರು ಹೋಗುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ. 

ಘಟನೆಯ ನಂತರ ಲಾವಣ್ಯ ಅವರ ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.
tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.

ಶಿವಮೊಗ್ಗ: ಬೈಕ್​ ಅಪಘಾತ ,ಬಿಟಿವಿ ವರದಿಗಾರ ಅನಿಲ್ ನಿಧನ

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

tragic accdent occurred at McGann Hospital premises, Shimoga, where a water tanker hit a scooty, killing PG medical student Lavanya.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor