ರಿಪ್ಪನ್‌ಪೇಟೆ: ಕ್ಯಾಂಟರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಎರಡು ಗೋವುಗಳ ಸಾವು

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ರಿಪ್ಪನ್‌ಪೇಟೆ: ಅಪರಿಚಿತ ವಾಹನವೊಂದು ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಎರಡು ಗೋವುಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎದುರು ಸಂಭವಿಸಿದೆ.

ಘಟನೆಯ ವಿವರ:

ಬೆಳಗಿನ ಜಾವ 4:30ರ ಸುಮಾರಿಗೆ ರಸ್ತೆಯಲ್ಲಿ ನಿಂತಿದ್ದ ಗೋವುಗಳಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು, ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದೆ. ಪರಿಣಾಮವಾಗಿ ತೀವ್ರ ಗಾಯಗೊಂಡಿದ್ದ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿವೆ. ಇನ್ನುಳಿದ ಎರಡು ಗೋವುಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಅವುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ಕೊಡಿಸಿದರು. ಬಳಿಕ ಮೃತಪಟ್ಟ ಗೋವುಗಳ ಅಂತ್ಯಸಂಸ್ಕಾರವನ್ನು ನೆರವೇರಿಸಿದರು.

ಅಪಘಾತಕ್ಕೆ ಕಾರಣವಾದ ವಾಹನವು ಕ್ಯಾಂಟರ್ ಇರಬಹುದು ಎಂದು ಸ್ಥಳೀಯರು ಶಂಕಿಸಿದ್ದು, ಈವರೆಗೆ ವಾಹನದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ರಿಪ್ಪನ್‌ಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor