ಕೂಲಿ ಕೆಲಸಕ್ಕೆ ಹೋಗಿ ಬರುವಾಗ ಆಘಾತ! ನಿಂತಿದ್ದ ಬೋರ್ ಲಾರಿಗೆ ಗುದ್ದಿದ ಬೊಲೆರೋ! ಓರ್ವ ಸಾವು! ನಡೆದಿದ್ದೇನು?

This Article Written by / ajjimane ganesh / ಜನವರಿ 29, 2026

Tragic incident Near Doranalu 1 Laborer Dead, 6 Injured as Bolero Hits Lorry

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದೋರನಾಳು ಗ್ರಾಮದ ಬಳಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಬೊಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಕೆಲಸ ಮುಗಿಸಿಕೊಂಡು ತಮ್ಮ ಊರಿಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೊಲೆರೋ ವಾಹನದಲ್ಲಿ ಒಟ್ಟು 7 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ಒಬ್ಬರು ಮೃತಪಟ್ಟರೆ, ಉಳಿದ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 

Tragic incident Near Doranalu 1 Laborer Dead, 6 Injured as Bolero Hits Lorry
Tragic incident Near Doranalu 1 Laborer Dead, 6 Injured as Bolero Hits Lorry

ಗಾಯಾಳುಗಳನ್ನು ತಕ್ಷಣವೇ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆದರೆ ಗಾಯಗಳ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ಎಲ್ಲರನ್ನೂ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಇವರೆಲ್ಲರೂ ಶಿವಮೊಗ್ಗದ ಎಂ.ಸಿ. ಹಳ್ಳಿಯಿಂದ ದಿನನಿತ್ಯ ಕೂಲಿ ಕೆಲಸಕ್ಕಾಗಿ ಕಾರ್ಮಿಕರು ಕಲ್ಲತ್ತಿಗಿರಿಗೆ ಹೋಗಿ ಬರುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಕಲ್ಲತ್ತಿಗಿರಿಯಿಂದ ಎಂ.ಸಿ. ಹಳ್ಳಿಗೆ ಬೊಲೆರೋ ವಾಹನದಲ್ಲಿ ಮರಳುತ್ತಿದ್ದಾಗ, ದೋರನಾಳು ಗ್ರಾಮದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಬೋರ್ ವೆಲ್​ ಕೊರೆಯುವ ಲಾರಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ತರೀಕೆರೆ ಮತ್ತು ಲಿಂಗದಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.  

ಆನವಟ್ಟಿ: 5 ತಿಂಗಳಿನಿಂದ ಮನೆಗೆ ಬಾರದ ಮಹಿಳೆ; ಚಹರೆ ವಿವರ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು. 

Tragic incident Near Doranalu 1 Laborer Dead, 6 Injured as Bolero Hits Lorry
Tragic incident Near Doranalu 1 Laborer Dead, 6 Injured as Bolero Hits Lorry
ದೋರನಾಳು ಅಪಘಾತ: ಬೋರ್ ಲಾರಿಗೆ ಬೊಲೆರೋ ಡಿಕ್ಕಿ – ಕಾರ್ಮಿಕ ಸಾವು, 6 ಜನರಿಗೆ ಗಾಯ Tragic incident Near Doranalu: 1 Laborer Dead, 6 Injured as Bolero Hits Lorry

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

shivamogga hospital

ಮುಂದಿನ ಸುದ್ದಿ ಒದಿ