ಶಿಷ್ಯ ವೇತನದ ಜೊತೆ ನ್ಯಾಯವಾದಿ ವೃತ್ತಿಯ (ವಕೀಲರು) ತರಬೇತಿ | ಇಲ್ಲಿದೆ ಅವಕಾಶ

Training of Legal Profession Lawyers with Scholarship | Here's the chance

ಶಿಷ್ಯ ವೇತನದ ಜೊತೆ ನ್ಯಾಯವಾದಿ ವೃತ್ತಿಯ (ವಕೀಲರು) ತರಬೇತಿ | ಇಲ್ಲಿದೆ ಅವಕಾಶ
Training of Lawyers

SHIVAMOGGA | MALENADUTODAY NEWS | Jun 29, 2024  ಮಲೆನಾಡು ಟುಡೆ 

ಶಿವಮೊಗ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2024-25 ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ಎರಡು ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

 

ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪ.ಜಾ.ಗೆ ಸೇರಿದವರಾಗಿರಬೇಕು.  ಕಾನೂನು ಪದವಿ ಪಡೆದು 2 ವರ್ಷಗಳ ಒಳಗಿರಬೇಕು.  ಆಯ್ಕೆಯಾದವರಿಗೆ ಪ್ರತಿ ಮಾಹೆ ಹತ್ತು ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು. 

 

ಆಸಕ್ತರು ಇಲಾಖೆಯ ವೆಬ್‍ಸೈಟ್ WWW.SW.KAR.NIC.IN  ರ ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

 

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ, 100 ಅಡಿರಸ್ತೆ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ವೆಬ್‍ಸೈಟ್ ಅಥವಾ ದೂ.ಸಂ.: 08182-249241 ನ್ನು ಸಂಪರ್ಕಿಸುವುದು.