SHIVAMOGGA NEWS TODAY

ಶಿವಮೊಗ್ಗ: ಪ್ರವಾಸಕ್ಕೆ ತೆರಳಿದ್ದ ಕಾಲೇಜು ವಿದ್ಯಾರ್ಥಿಗಳ ಬಸ್ ಅಪಘಾತ; ಇಬ್ಬರು ಸಾವು, ಹಲವರಿಗೆ ಗಾಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಭೀಕರ ಅಪಘಾತಕ್ಕೀದೆ. ಅಪಘಾತದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ : ಬಟ್ಟೆ ವ್ಯಾಪಾರಿಗೆ ಲಾಂಗ್ ತೋರಿಸಿ ಹಣ ಸುಲಿಗೆ, ಪ್ರಕರಣ ದಾಖಲು

ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಮುರುಡೇಶ್ವರದಿಂದ ಉಡುಪಿಯತ್ತ ಬರುತ್ತಿದ್ದ ಬಸ್, ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು  ತಿಳಿದುಬಂದಿದೆ.

ಬಸ್​​ನಲ್ಲಿ ಒಟ್ಟು 24 ವಿದ್ಯಾರ್ಥಿಗಳು 23 ವಿದ್ಯಾರ್ಥಿನಿಯರು ಹಾಗೆಯೇ 4 ಜನ ಸಿಬ್ಬಂದಿಗಳಿದ್ದು ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ, ಅದರಲ್ಲಿ ಗಂಭೀರ ಸ್ಥಿತಿಯಲ್ಲಿರುವವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

Trasi Beach Highway Accident Several Injured 

Trasi Beach Highway Accident Several Injured 
Trasi Beach Highway Accident Several Injured 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY