ಕೊಪ್ಪಳಕ್ಕೆ ಹೋಗ್ತಿದ್ದ ಲಾರಿ ಶಿವಮೊಗ್ಗದಲ್ಲಿ ಪಲ್ಟಿ! ಚಂದ್ರಗುತ್ತಿ ದೇವಸ್ಥಾನದ ನೌಕರ ಆತ್ಮಹತ್ಯೆ! ಸ್ಕೂಲ್​ ಬಂದ್ ಮಾಡಿ ಪ್ರತಿಭಟನೆ! TODAY@NEWS

KARNATAKA NEWS/ ONLINE / Malenadu today/ Aug 26, 2023 SHIVAMOGGA NEWS

ಶಿವಮೊಗ್ಗ  ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್​ಪೇಟೆ ಸಮೀಪ ಕಲ್ಲಿದ್ದಲು ತುಂಬಿದ ಲಾರಿಯೊಂದು ಪಲ್ಟಿಯಾಗಿದೆ. ಮಂಗಳೂರಿನಿಂದ ಕೊಪ್ಪಳಕ್ಕೆ ಹೋಗುತ್ತಿದ್ದ ಲಾರಿಯೊಂದು ಇಲ್ಲಿನ ಸೂಡೂರು ಸಮೀಪ ಆಕ್ಸಿಡೆಂಟ್ ಆಗಿದೆ.  9ನೇ ಮೈಲಿಕಲ್ಲಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಉರುಳಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Malenadu Today Shivamogga

 

ಮುಖ್ಯಶಿಕ್ಷಕನ ವಿರುದ್ಧ ಪ್ರತಿಭಟನೆ 

ಹೊಸನಗರ ತಾಲ್ಲೂಕಿನ  ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.  ಮುಖ್ಯಶಿಕ್ಷಕ ಗಂಗಾನಾಯ್ಕ ಕೆಲವು ತಿಂಗಳಿಂದ ಶಾಲೆಗೆ ಸರಿಯಾಗಿ ಬರುತ್ತಿಲ್ಲ. ಮಕ್ಕಳ ಶಿಕ್ಷಣಕ್ಕೆ ತೊಡಕುಂಟು ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ಧಾರೆ. ಇನ್ನೂ ವಿಷಯ ತಿಳಿದು ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ಧಾರೆ.  

Malenadu Today Shivamogga

 

ಸೊರಬ ತಾಲ್ಲೂಕಿನ  ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಸ್ಥಾನದ ದಿನಗೂಲಿ ನೌಕರ ಗಣಪತಿ ತಾವರೆಹಳ್ಳಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ನೇಣಿಗೆ ಶರಣಾಗಿದ್ದಾರೆ. ಈ ಸಂಬಂದ ಸೊರಬ ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್ ದಾಖಲಾಗಿದೆ. 


 

ಇನ್ನಷ್ಟು ಸುದ್ದಿಗಳು

 

 


 

 

Leave a Comment