ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.
ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ ಹೊರಟಿದ್ದರು. ಕೂರನಕೊಪ್ಪ ಗ್ರಾಮದ ಬಳಿ ಟಿಟಿ ಪಲ್ಟಿಯಾಗಿದೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ 12 ಮಹಿಳೆಯರು ಮತ್ತು ಚಾಲಕ ಸೇರಿ ಒಟ್ಟು 13 ಮಂದಿ ಗಾಯಗೊಂಡಿದ್ದಾರೆ..ಘಟನೆಗೆ ಕಾರಣ ಸ್ಪಷ್ಟವಾಗಿಲ್ಲ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.,
ಇದನ್ನು ಸಹ ಓದಿ ಸ್ವಾತಿ ಪ್ರೇಮ ಪ್ರಕರಣ, ನಿಜಕ್ಕೂ ನಡೆದಿದ್ದೇನು, ಕೊಲೆನಾ.? ಆತ್ಮಹತ್ಯೆನಾ.? ಕಿರುಕುಳನಾ.? ಜೆಪಿ ಬರೆಯುತ್ತಾರೆ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
12 women and a driver traveling from Bangalore to Sigandur Chowdeshwari temple sustain injuries after their TT vehicle overturns near Kurunakoppa