tunga Bagina Ceremony : ತುಂಬಿದ ತುಂಗೆಗೆ ಬಾಗಿನ ಅರ್ಪಿಸಿದ ಜಿಲ್ಲಾ ಬಿಜೆಪಿ
tunga Bagina Ceremony : ಶಿವಮೊಗ್ಗ : ತುಂಗಾ ನದಿಯು ಉತ್ತಮ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದ್ದು ಈ ನಿಟ್ಟಿನಲ್ಲಿ ಇಂದು ಬಿಜೆಪಿ ಶಿವಮೊಗ್ಗ ನಗರ ಸಮಿತಿ ತುಂಗೆಗೆ ಬಾಗಿನವನ್ನು ಅರ್ಪಿಸಿತು.
ಇಂದು ಬೆಳಿಗ್ಗೆ ನದಿಗೆ ಗೌರವ ಸಲ್ಲಿಸುವ ಹಾಗೂ ಪ್ರಕೃತಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಬಿಜೆಪಿ ಶಿವಮೊಗ್ಗ ನಗರ ಸಮಿತಿಯಿಂದ ‘ತುಂಗಾ ನದಿಗೆ ಬಾಗಿನ ಅರ್ಪಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕೋರ್ಪಲಯ್ಯ ಛತ್ರ ಮಂಟಪದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಭಾಗವಹಿಸಿ, ತಾಯಿ ತುಂಗೆಗೆ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಶಾಸಕ ಎಸ್ ಎನ್ ಚನ್ನಬಸಪ್ಪ ತುಂಗಾ ನದಿಯು ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನಕ್ಕೆ ಪ್ರಮುಖ ಆಧಾರವಾಗಿದೆ. ನದಿಗೆ ಬಾಗಿನ ಅರ್ಪಿಸುವ ಸಂಸ್ಕೃತಿಯು ನಮ್ಮ ನಾಡಿನ ನದಿಪೂಜಾ ಪರಂಪರೆಯ ಪ್ರತಿಬಿಂಬವಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಹರಿಕೃಷ್ಣ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲೆ ಹಾಗೂ ನಗರ ಸಮಿತಿಯ ಪ್ರಮುಖರು, ವಿವಿಧ ಮೋರ್ಚಾಗಳ ಸದಸ್ಯರು, ಧಾರ್ಮಿಕ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ನಾಗರಿಕರು ಉಪಸ್ಥಿತರಿದ್ದರು.
